ಹಳಿ ತಪ್ಪಿದ ಕಲ್ಲಿದ್ದಲು ತುಂಬಿದ್ದ ಗೂಡ್ಸ್ ರೈಲು

ಈ ಸುದ್ದಿಯನ್ನು ಶೇರ್ ಮಾಡಿ

train

ಹೈದರಾಬಾದ್, ಜ.7-ಕಲ್ಲಿದ್ದಲು ತುಂಬಿದ್ದ ಗೂಡ್ಸ್ ರೈಲೊಂದು ಮಹಾರಾಷ್ಟ್ರದ ವಿಹಿರ್‍ಗಾಂವ್ ರೈಲು ನಿಲ್ದಾಣದ ಬಳಿ ಹಳಿ ತಪ್ಪಿದ ಘಟನೆ ಸಂಭವಿಸಿದೆ. ಈ ಘಟನೆಯಲ್ಲಿ ಸಾವು-ನೋವು ಸಂಭವಿಸಿಲ್ಲ. ರೈಲು ಹಳಿ ತಪ್ಪಿದ ಕಾರಣ ಈ ಮಾರ್ಗದಲ್ಲಿ ಸಂಚಾರಕ್ಕೆ ಅಡಚಣೆಯಾಯಿತು.  140 ಟನ್ ಸಾಮಥ್ರ್ಯದ ಕ್ರೇನ್‍ಗಳನ್ನು ಬಳಸಿ ದುರಸ್ತಿ ಕಾರ್ಯ ನಡೆಸಲಾಗಿದೆ. 11 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿತ್ತು. ಅಲ್ಲದೇ, ಕೆಲವು ರೈಲುಗಳ ಮಾರ್ಗವನ್ನು ಬದಲಿಸಲಾಗಿತ್ತು. ದಕ್ಷಿಣ ರೈಲ್ವೆಯ ಕಾಜಿಪೇಟೆ ಬಲರ್ಷಾ ವಿಭಾಗದಲ್ಲಿ ಶುಕ್ರವಾರ ಈ ಘಟನೆ ನಡೆದಿದೆ ಎಂದು ಪ್ರಧಾನ ಸಾರ್ವಜನಿಕ ಸಂಪರ್ಕಾಧಿಕಾರಿ ಉಮಾಶಂಕರ್ ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Eesanje News 24/7 ನ್ಯೂಸ್ ಆ್ಯಪ್ –  Click Here to Download 

 

Facebook Comments

Sri Raghav

Admin