ಚಿಕ್ಕರಾಯಪ್ಪ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಲೋಕಾಯುಕ್ತ ನ್ಯಾಯಾಲಯ

ಈ ಸುದ್ದಿಯನ್ನು ಶೇರ್ ಮಾಡಿ

Chikkarayappa-01

ಬೆಂಗಳೂರು, ಜ.9-ಅಕ್ರಮ ಆದಾಯ ಪತ್ತೆ ಪ್ರಕರಣಕ್ಕೆ ಸಂಬಂಸಿದಂತೆ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಚಿಕ್ಕರಾಯಪ್ಪ ಅವರ ಜಾಮೀನು ಅರ್ಜಿಯ ಅಂತಿಮ ತೀರ್ಪನ್ನು ಲೋಕಾಯುಕ್ತ ನ್ಯಾಯಾಲಯ ಜ.13ಕ್ಕೆ ಕಾಯ್ದಿರಿಸಿದೆ.  ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭದಲ್ಲಿ ಚಿಕ್ಕರಾಯಪ್ಪ ನಿವಾಸದಲ್ಲಿ ಭಾರೀ ಪ್ರಮಾಣದ ಅಕ್ರಮ ಆಸ್ತಿ, ನಗದು, 2 ಸಾವಿರ ಹೊಸ ನೋಟುಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಸಿದಂತೆ ಎಸಿಬಿ ಸ್ವಯಂಪ್ರೇರಿತ ದೂರಿನ ಹಿನ್ನೆಲೆಯಲ್ಲಿ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಲೋಕಾಯುಕ್ತ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿತು.

ಈ ಪ್ರಕರಣದಲ್ಲಿ ಎಸಿಬಿ ಅಕಾರಿಗಳ ಎದುರು ಎರಡು ದಿನಗಳ ಹಿಂದೆ ಚಿಕ್ಕರಾಯಪ್ಪ ಹಾಜರಾಗಿ ವಿಚಾರಣೆ ಎದುರಿಸಿದ್ದರು. ಇಂದು ಲೋಕಾಯುಕ್ತ ನ್ಯಾಯಾಲಯದಲ್ಲಿ ಎಸಿಬಿ ಅಧಿಕಾರಿಗಳು ಚಿಕ್ಕರಾಯಪ್ಪ ವಿಚಾರಣೆಗೆ ಸಹಕರಿಸುತ್ತಿದ್ದಾರೆ ಎಂದು ನ್ಯಾಯಾಧೀಶರಿಗೆ ತಿಳಿಸಿದರು.  ಚಿಕ್ಕರಾಯಪ್ಪ ಅವರ ಪರ ವಕೀಲ ಸಿ.ಜೆ.ಸುಂದರೇಶ್ ವಾದ ಮಂಡಿಸಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಜ.13ಕ್ಕೆ ಅರ್ಜಿಯ ತೀರ್ಪನ್ನು ಕಾಯ್ದಿರಿಸಿದೆ.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin