ಡಿಜಿಟಲೀಕರಣದಿಂದ ಬದಲಾಗಲಿದೆ ಭಾರತದ ಚಿತ್ರಣ : ಸದಾನಂದಗೌಡ

ಈ ಸುದ್ದಿಯನ್ನು ಶೇರ್ ಮಾಡಿ

sadananda

ಬೆಂಗಳೂರು, ಜ.9- ಡಿಜಿಟಲೀಕರಣದಿಂದ ದೇಶದ ಚಿತ್ರಣವೇ ಸಂಪೂರ್ಣವಾಗಿ ಬದಲಾಗಲಿದೆ ಎಂದು ಕೇಂದ್ರ ಸಚಿವ ಸದಾನಂದಗೌಡ ಇಂದಿಲ್ಲಿ ಅಭಿಪ್ರಾಯಪಟ್ಟರು.  ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ನಡೆಯುತ್ತಿರುವ ಪ್ರವಾಸಿ ಭಾರತೀಯ ದಿವಸ್‍ನ ಸಮಾರಂಭದಲ್ಲಿ ಮಾತನಾಡಿದ ಅವರು, ಡಿಜಿಟಲೀಕರಣದಿಂದ ಪ್ರಧಾನಿ ನರೇಂದ್ರ ಮೋದಿ ಅವರ ಕನಸು ಅದರಂತೆ ಎಲ್ಲಾ ಕ್ಷೇತ್ರಗಳಲ್ಲೂ ಡಿಜಿಟಲೀಕರಣವನ್ನು ಅಳವಡಿಸಿಕೊಳ್ಳಲಾಗಿದೆ. ಇದರ ಬಳಕೆಯಿಂದ ಇಡೀ ದೇಶದ ಚಿತ್ರಣವೇ ಬದಲಾಗಲಿದೆ ಎಂದು ಹೇಳಿದರು.  ನಮ್ಮ ದೇಶದ ರೈತರು ಸಹ ಡಿಜಿಟಲೀಕರಣದ ಬಗ್ಗೆ ಅದನ್ನು ಬಳಸಿದರೆ ಹೆಚ್ಚಿನ ಅನುಕೂಲವಾಗಲಿದೆ. ಇದರಿಂದ ಯಾವುದೇ ವಂಚನೆ ಸಾಧ್ಯವಿಲ್ಲ.

ಮಧ್ಯವರ್ತಿಗಳ ಹಾವಳಿಯೂ ತಪ್ಪಲಿದೆ ಎಂದು ವಿವರಿಸಿದರು.  ಕೌಶಲ್ಯಾಭಿವೃದ್ಧಿಗೆ ಕೇಂದ್ರ ಸರ್ಕಾರ ಹೆಚ್ಚು ಒತ್ತು ನೀಡುತ್ತಿದೆ. ದೇಶದ ಒಟ್ಟು ಜನಸಂಖ್ಯೆಯಲ್ಲಿ ಶೇ.35ರಷ್ಟು ಯುವ ಜನರಿದ್ದಾರೆ. ಹಾಗಾಗಿ ಇವರಿಗೆ ಕೌಶಲ್ಯ ಭರಿತ ತರಬೇತಿಗಳನ್ನು ನೀಡಲು ಈಗಾಗಲೇ ದೇಶಾದ್ಯಂತ ಕೌಶಲ್ಯಾಭಿವೃದ್ಧಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಸಾಕಷ್ಟು ಮಂದಿ ತರಬೇತಿಯನ್ನು ಪಡೆದಿದ್ದಾರೆ ಎಂದರು.  ಅವರಿಗೆ ಇಷ್ಟವಾದ ಕ್ಷೇತ್ರಗಳಲ್ಲಿ ಉದ್ಯೋಗ ಗಳಿಸಿ ಉತ್ತಮ ಸ್ಥಾನ ಗಳಿಸಿದ್ದಾರೆ. ಇಂತಹ ಯುವ ಜನರ ಪ್ರತಿಭೆಯನ್ನು ಬಳಸಿಕೊಂಡು ದೇಶದ ಅಭಿವೃದ್ಧಿಯತ್ತ ಹೆಜ್ಜೆ ಹಾಕುತ್ತಿದ್ದೇವೆ ಎಂದು ತಿಳಿಸಿದರು.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin