ನಂಜನಗೂಡು ಚುನಾವಣೆಯಲ್ಲಿ ನನ್ನ ಮಗ ಅಭ್ಯರ್ಥಿಯಾಗುವ ಪ್ರಶ್ನೆಯೇ ಇಲ್ಲ : ಎಚ್.ಸಿ.ಮಹದೇವಪ್ಪ

ಈ ಸುದ್ದಿಯನ್ನು ಶೇರ್ ಮಾಡಿ

mahadevappa
ಮೈಸೂರು,ಜ.9-
ನಂಜನಗೂಡು ಉಪಚುನಾವಣೆಯಲ್ಲಿ ನನ್ನ ಮಗ ಅಭ್ಯರ್ಥಿಯಾಗುವ ಪ್ರಶ್ನೆಯೇ ಇಲ್ಲ. ನಮ್ಮ ಪಕ್ಷದಲ್ಲಿಯೂ ಕೂಡ ಇದರ ಬಗ್ಗೆ ಮಾತುಕತೆ ನಡೆದಿಲ್ಲ ಎಂದು ಸಚಿವ ಎಚ್.ಸಿ.ಮಹದೇವಪ್ಪ ಇಂದಿಲ್ಲಿ ತಿಳಿಸಿದರು. ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಹಾಗೂ ಅಪರಾಧ ಮಾಸಾಚರಣೆ, ನೂತನ ಪೊಲೀಸ್ ಗಸ್ತು ವಾಹನಗಳ ಚಾಲನೆ ಸಮಾರಂಭದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಮಗನಿಗೆ ನಮ್ಮ ಪಕ್ಷದಲ್ಲಿ ಟಿಕೆಟ್ ಕೇಳಿಲ್ಲ.

ಆತನೂ ಸಹ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಎಲ್ಲಿಯೂ ಹೇಳಿಲ್ಲ ಎಂದು ತಿಳಿಸಿದರು. ನಂಜನಗೂಡು ಕ್ಷೇತ್ರದ ಕಾರ್ಯಕರ್ತರ ಅಭಿಪ್ರಾಯದಂತೆ ಸೂಕ್ತ ವ್ಯಕ್ತಿಯ ಆಯ್ಕೆ ನಡೆಯಲಿದೆ. ಚುನಾವಣೆ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲ ಇಲ್ಲ. ಪಕ್ಷದ ವೀಕ್ಷಕರು ಕ್ಷೇತ್ರಕ್ಕೆ ಬಂದು ಕಾರ್ಯಕರ್ತರ ಅಭಿಪ್ರಾಯವನ್ನು ಸಂಗ್ರಹಿಸಿದ್ದು, ಈ ಬಗ್ಗೆ ಕಾಂಗ್ರೆಸ್‍ನಲ್ಲಿ ಗೊಂದಲವಿಲ್ಲ ಎಂದು ಸ್ಪಷ್ಟಪಡಿಸಿದರು. ಆಯ್ಕೆ ಕುರಿತು ಹೈಕಮಾಂಡ್ ಅವರ ನಿರ್ಧಾರವೇ ಅಂತಿಮ ಎಂದು ಎಚ್.ಸಿ.ಮಹದೇವಪ್ಪ ತಿಳಿಸಿದರು.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin