ಮಹಿಳೆಯರ ಸುರಕ್ಷತೆ ಮತ್ತು ಘನತೆ ರಕ್ಷಣೆ ನಮ್ಮ ಸರ್ಕಾರದ ಪ್ರಧಾನ ಆದ್ಯತೆ : ಸಿದ್ದರಾಮಯ್ಯ

ಈ ಸುದ್ದಿಯನ್ನು ಶೇರ್ ಮಾಡಿ

siddu
ಬೆಂಗಳೂರು, ಜ.8- ಮಹಿಳೆಯರ ಸುರಕ್ಷತೆ ಮತ್ತು ಘನತೆ ರಕ್ಷಣೆ ನಮ್ಮ ಸರ್ಕಾರದ ಪ್ರಧಾನ ಆದ್ಯತೆಯಾಗಿದೆ ಎಂದು ಸಾರಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಂತಹ ಕೃತ್ಯಗಳಲ್ಲಿ ತೊಡಗುವವರ ವಿರುದ್ಧ ಅತ್ಯುಗ್ರ ಕ್ರಮಗಳನ್ನು ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ. ಬೆಂಗಳೂರಿಗೆ ಕಳಂಕ ತಂದಿರುವ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಹಾಕಲು ಅಗತ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳುವುದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲೇ ಮುಖ್ಯಮಂತ್ರಿ ಆಶ್ವಾಸನೆ ನೀಡಿದ್ದಾರೆ.  ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಕಿರುಕುಳ ಪ್ರಕರಣದ ಬಗ್ಗೆ ಪ್ರವಾಸಿ ಭಾರತೀಯ ದಿವಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಇಂತಹ ಘಟನೆಗಳು ಮತ್ತೆ ಮರುಕಳಿಸಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.  ಅನಿವಾಸಿ ಭಾರತೀಯರಿಗೆ ರಾಜ್ಯದಲ್ಲಿ ಒದಗಿಸಲಾಗಿರುವ ವಿಫುಲ ಅಕವಾಶಗಳ ಕುರಿತು ಪ್ರಸ್ತಾಪಿಸಿದ ಅವರು, ರಾಜ್ಯ ಹಾಗೂ ಅನಿವಾಸಿ ಕನ್ನಡಿಗರು ಮತ್ತು ಅನಿವಾಸಿ ಭಾರತೀಯರ ನಡುವೆ ನಿರಂತರ ಸುಸ್ಥಿರಗತಿ ಸಂಪರ್ಕಗಳನ್ನು ಸಾಸಲು ವೇಗವರ್ಧಕ ಪಾತ್ರದ ನಿರ್ವಹಣೆಗಾಗಿ ರಾಜ್ಯ ಸರ್ಕಾರ ಕಳೆದ ಎರಡು ದಿನಗಳ ಹಿಂದಷ್ಟೇ ಕರ್ನಾಟಕದ ಎನ್‍ಆರ್‍ಐ ನೀತಿಯನ್ನು ಪ್ರಕಟಿಸಿದೆ. ಈ ಮೂಲಕ ಜಗತ್ತಿನ ವಿವಿಧ ಭಾಗಗಳಲ್ಲಿರುವ ಅನಿವಾಸಿ ಭಾರತೀಯರಿಗೆ ರಾಜ್ಯದಲ್ಲಿ ಹೆಚ್ಚಿನ ಅವಕಾಶ ನೀಡಲು ಉದ್ದೇಶಿಸಲಾಗಿದೆ ಎಂದು ಹೇಳಿದರು.

ತಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದ ಇಲ್ಲಿಯ ತನಕ 2.29 ಲಕ್ಷ ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆಗಾಗಿ 800 ಯೋಜನೆಗಳಿಗೆ ಅನುಮೋದನೆ ನೀಡಿದೆ. 5.79 ಲಕ್ಷ ಜನರಿಗೆ ಉದ್ಯೋಗವಕಾಶಗಳನ್ನು ಸೃಷ್ಟಿಸುವ ಸಾಮಥ್ರ್ಯವನ್ನು ನಾವು ಹೊಂದಿದ್ದೇವೆ ಎಂದು ಸಿದ್ದರಾಮಯ್ಯ ವಿವರಿಸಿದರು. ಅನಿವಾಸಿ ಭಾರತೀಯರಿಗೆ ಮತ್ತು ಅನಿವಾಸಿ ಕನ್ನಡಿಗರಿಗೆ ರಾಜ್ಯದಲ್ಲಿ ಉತ್ತಮ ಬಂಡವಾಳ ಹೂಡಿಕೆ ವಾತಾವರಣ ಸೃಷ್ಟಿಸುವುದಕ್ಕಾಗಿ ಅನಿವಾಸಿ ಭಾರತೀಯರ ವೇದಿಕೆ ಸ್ಥಾಪಿಸಿದೆ. ಆ ಮೂಲಕ ಜಗತ್ತಿನ ವಿವಿಧ ದೇಶಗಳಲ್ಲಿರುವ ಎನ್‍ಆರ್‍ಐಗಳು ಕರ್ನಾಟಕದಲ್ಲಿ ಬಂಡವಾಳ ತೊಡಗಿಸುವ ಹಾದಿಯನ್ನು ಸುಲಭಗೊಳಿಸಲಾಗಿದೆ ಎಂದು ಅವರು ಹೇಳಿದರು.  ಆರೋಗ್ಯಕರ ಉದ್ಯಮ ವಾತಾವರಣ ಸೃಷ್ಟಿಸಲು ಮತ್ತು ವಿಶ್ವ ಬ್ಯಾಂಕ್‍ನ ಬಂಡವಾಳ ವಾತಾವರಣ ಸೂಚ್ಯಂಕದಿಂದ ಬಂಡವಾಳಗಳನ್ನು ಆಕರ್ಷಿಸುವಲ್ಲಿ ರಾಜ್ಯ ಪ್ರಥಮ ಸ್ಥಾನದಲ್ಲಿದೆ ಎಂಬ ಹೆಗ್ಗಳಿಕೆ ಇದೆ ಎಂದು ಪ್ರವಾಸಿ ಭಾರತೀಯ ದಿವಸ್ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಹೆಮ್ಮೆಯಿಂದ ಘೋಷಿಸಿದರು.  ಕೈಗಾರಿಕಾ ನೀತಿ ಮತ್ತು ಉತ್ತೇಜನ ಇಲಾಖೆ ಆಗಸ್ಟ್ 2016ರಲ್ಲಿ ಪ್ರಕಟಿಸಿದ ಅಂಕಿ-ಅಂಶಗಳು ಬಹಿರಂಗಗೊಳಿಸುವಂತೆ ವಿದೇಶಿ ಬಂಡವಾಳ ಆಕರ್ಷಣೆಯಲ್ಲಿ ಕರ್ನಾಟಕ ಅಗ್ರಸ್ಥಾನದಲ್ಲಿದೆ. ರಾಜ್ಯದ ದೇಶೀಯ ಒಟ್ಟು ಉತ್ಪನ್ನ (ಜಿಡಿಪಿ)ಕ್ಕೆ ಸಂಬಂಸಿದಂತೆ ರಾಜ್ಯವು ಅತ್ಯಕ ರಫ್ತು ವಹಿವಾಟು ಸಹ ಹೊಂದಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

Eesanje News 24/7 ನ್ಯೂಸ್ ಆ್ಯಪ್ –  Click Here to Download 

 

Facebook Comments

Sri Raghav

Admin