ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಸರ್ಕಾರ ಪಿಕ್‍ಪಾಕೆಟ್ ಪ್ರಕರಣದಂತೆ ನೋಡುತ್ತಿದೆ : ಈಶ್ವರಪ್ಪ

ಈ ಸುದ್ದಿಯನ್ನು ಶೇರ್ ಮಾಡಿ

K-S-eshawarrapp

ಶಿವಮೊಗ್ಗ, ಜ.8- ನಮ್ಮ ರಾಜ್ಯದಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸರ್ಕಾರ ಇವುಗಳನ್ನು ಪಿಕ್‍ಪಾಕೆಟ್ ಪ್ರಕರಣದಂತೆ ನೋಡುತ್ತಿದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿಬಿಟ್ಟಿದೆ. ಲೈಂಗಿಕ ದೌರ್ಜನ್ಯ ದಂತಹ ಪ್ರಕರಣ ಗಳನ್ನು ಸರ್ಕಾರ ಕೇವಲವಾಗಿ ನೋಡು ತ್ತಿದೆ. ಗೃಹ ಇಲಾಖೆ ತನಗೂ ಇದಕ್ಕೂ ಸಂಬಂಧವಿಲ್ಲದಂತೆ ವರ್ತಿಸುತ್ತಿದೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಇಂತಹ ಹೀನ ಕೃತ್ಯಗಳನ್ನು ತಡೆಗಟ್ಟಬೇಕು. ಅವರಿಗೆ ಆಸಕ್ತಿಯಿಲ್ಲದಿದ್ದಲ್ಲಿ ರಾಜೀನಾಮೆ ನೀಡಿ ಹೊರಬರಲಿ ಎಂದು ಆಗ್ರಹಿಸಿದರು. ಇನ್ನು ಮುಂದೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ನಡೆಯದಂತೆ ಗೃಹ ಸಚಿವರು ಕ್ರಮ ಕೈಗೊಳ್ಳಬೇಕು, ಆರೋಪಿ ಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದರು.

ರಾಯಣ್ಣ ಬ್ರಿಗೇಡ್: ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಕುರಿತು ಬಿ.ಎಸ್.ಯಡಿಯೂರಪ್ಪನವರಿಗೆ ಮಾತ್ರ ಸ್ವಲ್ಪ ಮಟ್ಟಿನ ಗೊಂದಲವಿದೆ. ಅದು ಕೂಡ ಬೇಗ ಬಗೆಹರಿಯಲಿದೆ. ಬ್ರಿಗೆಡ್ ಬಗ್ಗೆ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಗಮನಕ್ಕೆ ತಂದಿದ್ದೇನೆ. ಜ.26ರಂದು ರಾಯಣ್ಣ ಬ್ರಿಗೇಡ್ ಸಮಾವೇಶ ಹಮ್ಮಿಕೊಳ್ಳುತ್ತೇವೆ. ಇದರಲ್ಲಿ ಸುಮಾರು 2 ಲಕ್ಷಕ್ಕೂ ಹೆಚ್ಚು ಜನ ಭಾಗವಹಿಸಲಿದ್ದಾರೆ ಎಂದು ಈಶ್ವರಪ್ಪ ಇದೇ ವೇಳೆ ತಿಳಿಸಿದರು.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin