ಶಾಲೆಯಲ್ಲಿ ಸಂಭವಿಸಿದ ಬೆಂಕಿ ಆಕಸ್ಮಿಕದಿಂದ ಬಚಾವಾದ ಮಕ್ಕಳು

ಈ ಸುದ್ದಿಯನ್ನು ಶೇರ್ ಮಾಡಿ

Fire-01

ಗುಂಡ್ಲುಪೇಟೆ, ಜ.9– ಇಲ್ಲಿನ ವಿಶೇಷ ಮಕ್ಕಳ ಶಾಲೆಯಲ್ಲಿ ಇಂದು ಮುಂಜಾನೆ ಬೆಂಕಿ ಬಿದ್ದಿದೆ.   ಮೇಲ್ಛಾವಣಿ ಹಾಗೂ ಕೆಲ ವಸ್ತುಗಳು ಸುಟ್ಟು ಹೋಗಿದ್ದು, ಅದೃಷ್ಟವಶಾತ್ ಇದರಲ್ಲಿದ್ದ 30ಕ್ಕೂ ಹೆಚ್ಚು ಮಕ್ಕಳು ಹಾಗೂ ಸಿಬ್ಬಂದಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮುಂಜಾನೆ 3 ಗಂಟೆ ಸಂದರ್ಭದಲ್ಲಿ ಸುಟ್ಟ ವಾಸನೆ ಬರುತ್ತಿದ್ದುದನ್ನು ಗಮನಿಸಿದ ಶಾಲೆಯ ಸಿಬ್ಬಂದಿಯೊಬ್ಬರು  ತಕ್ಷಣ ಹೊರಗೆ ಬಂದು ನೋಡಿದಾಗ ಛಾವಣಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಎಲ್ಲರನ್ನು ಎಬ್ಬಿಸಿ ಹೊರಗೆ ಕರೆದುಕೊಂಡು ಬಂದು ಸುರಕ್ಷಿತ ಸ್ಥಳಕ್ಕೆ ತಲುಪಿಸಲಾಯಿತು.
ಬೆಂಕಿ ನಂದಿಸಲು ಸಾಕಷ್ಟು ಪ್ರಯಾಸ ಪಡಲಾಯಿತಾದರೂ ಆದರೂ ಸಾಧ್ಯವಾಗಲಿಲ್ಲ ಎಂದು ತಿಳಿದು ಬಂದಿದೆ.

ಇಲ್ಲಿ ಆಶ್ರಮವೂ ಕೂಡ ಇರುವುದರಿಂದ ಪ್ರತಿ ದಿನ ಇಲ್ಲಿ ನೂರಾರು ಮಂದಿ ಭೇಟಿ ನೀಡುತ್ತಾರೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ. ಶಾಲೆಯ ಬಳಿ ಆಸುಪಾಸಿನಲ್ಲಿದ್ದ ಮರಗಳು ಕೂಡ ಬೆಂಕಿಗೆ ಆಹುತಿಯಾಗಿದೆ.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin