ಕೇಂದ್ರದ ಮಲತಾಯಿ ಧೋರಣೆ ಖಂಡಿಸಿ ವಾಟಾಳ್ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

vatal

ಬೆಂಗಳೂರು, ಜ.10-ರಾಜ್ಯದಲ್ಲಿ ಭೀಕರ ಬರಗಾಲವಿದ್ದರೂ ಕೇಂದ್ರ ಸರ್ಕಾರ ಪರಿಹಾರ ನೀಡುವಲ್ಲಿ ತಾರತಮ್ಯ ಅನುಸರಿಸಿದೆ ಎಂದು ಆರೋಪಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಮೈಸೂರು ಬ್ಯಾಂಕ್ ವೃತ್ತದಲ್ಲಿಂದು ಕರಾಳ ದಿನ ಆಚರಿಸಿ ಕೇಂದ್ರ ಸರ್ಕಾರದ ಭೂತ ದಹನ ಮಾಡಲಾಯಿತು.   ಕನ್ನಡ ಒಕ್ಕೂಟದ ವತಿಯಿಂದ ಸಾ.ರಾ.ಗೋವಿಂದು, ಕೆ.ಆರ್. ಕುಮಾರ್, ಶಿವರಾಮೇಗೌಡ, ಪ್ರವೀಣ್‍ಕುಮಾರ್ ಶೆಟ್ಟಿ, ಮಂಜುನಾಥ್ ದೇವು, ಎಚ್.ವಿ. ಗಿರೀಶ್‍ಗೌಡ ಸೇರಿದಂತೆ ಮುಂತಾ ದವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಕರ್ನಾಟಕವನ್ನು ನಿರ್ಲಕ್ಷಿಸಿರುವ ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಲಾಯಿತು.

ಮಹದಾಯಿ, ಕಳಸಾಬಂಡೂರಿ ಯೋಜನೆ ಸಂಬಂಧ ಪ್ರಧಾನಿ ಮಧ್ಯೆ ಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕು, ಕಾವೇರಿ ವಿಷಯದಲ್ಲಿ ರಾಜ್ಯಕ್ಕೆ ಆಗು ತ್ತಿರುವ ನಿರಂತರ ಅನ್ಯಾಯವನ್ನು ತಪ್ಪಿಸಬೇಕು. ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಶಾಶ್ವತ ಕುಡಿಯುವ ನೀರು, ಚಿತ್ರದುರ್ಗ ಭದ್ರಾ ಮೇಲ್ದಂಡೆ ಯೋಜನೆ ಹಾಗೂ ಮೇಕೆದಾಟು ಯೋಜನೆಗಳನ್ನು ಕೂಡಲೇ ಪ್ರಾರಂಭಿಸಬೇಕೆಂದು ವಾಟಾಳ್ ನಾಗರಾಜ್ ಈ ಸಂದರ್ಭದಲ್ಲಿ ಆಗ್ರಹಿಸಿದರು.
ರಾಜ್ಯಸರ್ಕಾರ ಭೀಕರ ಬರಗಾಲಕ್ಕೆ ತುತ್ತಾಗಿದೆ. 4702 ಕೋಟಿ ರೂ.ಗಳನ್ನು ಬರ ಪರಿಹಾರಕ್ಕೆ ನೀಡಬೇಕೆಂದು ಮನವಿ ಮಾಡಿದರೂ ಕೇಂದ್ರ ಸರ್ಕಾರ ಕೇವಲ 1782 ಕೋಟಿ ರೂ. ನೀಡಿದೆ. ಆದರೆ ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ಬೇರೆ ರಾಜ್ಯಗಳಿಗೆ ಯಥೇಚ್ಚವಾಗಿ ಹಣವನ್ನು ನೀಡಿ ಕರ್ನಾಟಕಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿದರು.  ಮಹದಾಯಿ ವಿಷಯದಲ್ಲಿ ಮಧ್ಯಪ್ರವೇಶ ಮಾಡದೆ ಮೌನ ವಹಿಸಿದ್ದಾರೆ. ಕಾವೇರಿ ನದಿಯಿಂದ ತಮಿಳುನಾಡಿಗೆ ಮತ್ತೆ ನೀರು ಬಿಡಬೇಕೆಂದು ನ್ಯಾಯಾಲಯ ನೀಡಿರುವ ತೀಪು ಸಮಂಜಸವಲ್ಲ. ಇದು ಅತ್ಯಂತ ದುರ್ದೈವದ ತೀರ್ಪಾಗಿದೆ ಎಂದರು.  ಧಾರವಾಡದ ರೈತ ಹೋರಾಟ ಗಾರರನ್ನು ಪೊಲೀಸರು ಗಡಿಪಾರು ಮಾಡುವುದಾಗಿ ನೋಟಿಸ್ ನೀಡಿರುವ ಕ್ರಮವನ್ನು ಖಂಡಿಸಿದ ವಾಟಾಳ್ ಅವರು ಒಂದು ವಾರ ದೊಳಗಾಗಿ ವಾಪಸ್ ಪಡೆಯದಿದ್ದರೆ ಹೋರಾಟ ತೀವ್ರ ವಗೊಳಿಸುವುದಾಗಿ ಎಚ್ಚರಿಸಿದರು.  ಇತ್ತೀಚೆಗೆ ಉತ್ತರ ಕನ್ನಡ ಸಂಸದ ಅನಂತ್‍ಕುಮಾರ್ ಹೆಗ್ಡೆ ವೈದ್ಯರ ಮೇಲೆ ಹಲ್ಲೆ ನಡೆಸಿರುವುದು, ದಕ್ಷಿಣ ಕನ್ನಡ ಸಂಸದ ಬೆಂಕಿ ಹಚ್ಚುತ್ತೇವೆ ಎಂದು ಹೇಳಿರುವುದು. ಈ ಘಟನೆಗಳ ವಿರುದ್ಧ  ಪೊಲೀಸರು ಕ್ರಮಕೈಗೊಳ್ಳದೆ ಕೈಕಟ್ಟಿ ಕುಳಿತಿರುವುದು ಖಂಡನೀಯ ಎಂದುಹೇಳಿದರು.  ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ರಾಜ್ಯಕ್ಕೆ ಮಾಡುತ್ತಿರುವ ನಿರಂತರ ಅನ್ಯಾಯ ಖಂಡಿಸಿ ಫೆ.18 ರಂದು ರಾಜ್ಯ ಬಂದ್‍ಗೆ ಕರೆ ನೀಡ ಲಾಗಿದೆ ಎಂದು ಈ ಸಂದರ್ಭದಲ್ಲಿ ವಾಟಾಳ್ ತಿಳಿಸಿದರು.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin