ಕಾಡು ಹಂದಿಯನ್ನು ಬೇಟೆಯಾಡಲು ಹಾಕಿದ್ದ ಉರುಳಿಗೆ ಸಿಕ್ಕಿ ಚಿರತೆ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

beluru2

ಬೇಲೂರು, ಜ.12- ಕಾಡು ಹಂದಿಯನ್ನು ಬೇಟೆಯಾಡಲು ಹಾಕಿದ್ದ ಉರುಳಿಗೆ ಚಿರತೆಯೊಂದು ಸಿಲುಕಿ ಸಾವನಪ್ಪಿರುವ ಘಟನೆ ಶಿವಾಲದಹಳ್ಳಿ ಗ್ರಾಮದಲ್ಲಿ ನಡೆದಿದೆ.ಅರಣ್ಯ ಇಲಾಖೆ ಸಿಬ್ಬಂದಿಗಳು ಮೃತ ಚಿರತೆಯನ್ನು ವಶಕ್ಕೆ ಪಡೆದು ಕ್ರಮ ಕೈಗೊಂಡಿದ್ದಾರೆ.ತಾಲೂಕಿನ ಶಿವಾಲ್ದಾಹಳ್ಳಿ ಗ್ರಾಮದ ಸಮೀಪದ ತೋಟದಲ್ಲಿ ಕೆಲಸಕ್ಕೆಂದು ಆಗಮಿಸಿದ ಕೆಲಸಗಾರರು ಚಿರತೆ ನೋಡಿ ಗಾಬರಿಗೊಂಡು ಗ್ರಾಮಸ್ಥರಿಗೆ ತಿಳಿಸಿದ್ದಾರೆ. ಗ್ರಾಮಸ್ಥರು ಅರಣ್ಯ ಇಲಾಖೆಯವರಿಗೆ ಸುದ್ದಿ ತಿಳಿಸಿದ್ದಾರೆ.ತಕ್ಷಣ ಸ್ಥಳಕ್ಕಾಗಮಿಸಿದ ಸಿಬ್ಬಂದಿಗಳು ಉರುಳಿಗೆ ಸಿಲುಕಿ ಮೃತಪಟ್ಟಿರುವ ಮೂರು ವರ್ಷದ ಗಂಡು ಚಿರತೆ ಎಂದು ಮೇಲಾಧಿಕಾರಿಗಳಿಗೆ ತಿಳಿಸಿದ್ದಾರೆ.

ಕಾಡು ಹಂದಿಗಳನ್ನು ಬೇಟೆಯಾಡಲು ಯಾರೋ ಹಾಕಿದ ಉರುಳಿಗೆ ಚಿರತೆ ಸಿಲುಕಿ ಸ್ಥಳದಲ್ಲಿ ಮೃತಪಟ್ಟಿದೆ ಎಂದು ಗ್ರಾಮಸ್ಥರು ಹೇಳುತ್ತಾರೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯಾಧಿಕಾರಿ ಗಿರೀಶ್ ಮೃತ ಚಿರತೆಯನ್ನು ಪರಿಶೀಲಿಸಿ ಮಾತನಾಡಿ, ಯಾರೊ ಕಿಡಿಗೇಡಿಗಳು ಹಾಕಿದ ಉರುಳಿಗೆ ಮೂರು ವರ್ಷದ ಚಿರತೆ ಸಿಲುಕಿ ಮೃತಪಟ್ಟಿದ್ದು, ಈ ಕೃತ್ಯಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿ ತನಿಖೆ ನಡಸಲಾಗುವುದು ಹಾಗೂ ಮೃತ ಚಿರತೆಯನ್ನು ಮರಣೋತ್ತರ ಪರೀಕ್ಷೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin