ನೋಟು ರದ್ದತಿಯಿಂದ ಮಾನವ ಕಳ್ಳಸಾಗಣೆ ನಿಂತಿಲ್ಲ : ನೊಬೆಲ್ ವಿಜೇತ ಕೈಲಾಶ್ ಸತ್ಯಾರ್ಥಿ ತೀವ್ರ ಕಳವಳ

ಈ ಸುದ್ದಿಯನ್ನು ಶೇರ್ ಮಾಡಿ

Kailash-Satyarthi

ಭೋಪಾಲ್, ಜ.12-ಕೇಂದ್ರ ಸರ್ಕಾರದ ನೋಟು ನಿಷೇಧದಿಂದ ಮಾನವ ಕಳ್ಳಸಾಗಣೆ ಸಂಪೂರ್ಣವಾಗಿ ನಿಂತಿಲ್ಲ. ಈ ದಂಧೆಯಲ್ಲಿ 2,000 ರೂ.ಗಳ ಹೊಸ ಕರೆನ್ಸಿಗಳನ್ನೂ ಬಳಸಲಾಗುತ್ತಿದೆ ಎಂದು ನೋಬೆಲ್ ಪ್ರಶಸ್ತಿ ಪುರಸ್ಕøತರಾದ ಮಕ್ಕಳ ಹಕ್ಕುಗಳ ರಕ್ಷಣೆ ಕಾರ್ಯಕರ್ತ ಕೈಲಾಶ್ ಸತ್ಯಾರ್ಥಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.  ತಮ್ಮ ಹುಟ್ಟೂರು ವಿದಿಶಾದಲ್ಲಿ 63ನೇ ಜನ್ಮದಿನಾಚರಣೆ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ.8ರಂದು ನೋಟು ನಿಷೇಧದ ನಂತರ ಮಕ್ಕಳು ಮತ್ತು ಮಹಿಳೆಯರ ಕಳ್ಳಸಾಗಣೆಗೆ ಕಡಿವಾಣ ಬೀಳುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಅದು ಸಂಪೂರ್ಣವಾಗಿ ನಿಂತಿಲ್ಲ. ಹೊಸ ಕರೆನ್ಸಿಗಳನ್ನೂ ಈ ಕೃತ್ಯಕ್ಕಾಗಿ ವ್ಯಾಪಕವಾಗಿ ಬಳಸಲಾಗುತ್ತಿದೆ ಎಂದು ಅವರು ಬೇಸರ ಸೂಚಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಡಿಸೆಂಬರ್ 27ರಂದು ಡೆಹ್ರಾಡೂನ್‍ನಲ್ಲಿ ಚುನಾವಣಾ ರ್ಯಾಲಿಯೊಂದರಲ್ಲಿ ಮಾತನಾಡಿ, ನೋಟು ರದ್ದತಿಯಿಂದ ಭಯೋತ್ಪಾದನೆ, ಡ್ರಗ್ ಮಾಫಿಯಾ, ನಕ್ಸಲಿಸಂ ಮತ್ತು ಮಾನವ ಕಳ್ಳಸಾಗಣೆ ಗಣನೀಯವಾಗಿ ಇಳಿದಿದೆ ಎಂದು ಹೇಳಿದ್ದರು.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin