ರಾಜ್ಯ ಸರ್ಕಾರದ ವಿರುದ್ಧ ರೇವಣ್ಣ ಕಿಡಿ

ಈ ಸುದ್ದಿಯನ್ನು ಶೇರ್ ಮಾಡಿ

revanna

ಹಾಸನ,ಜ.12-ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ 164 ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಿದೆ. ಆದರೆ ಇದುವರೆಗೂ ಬರಪೀಡಿತ ಪ್ರದೇಶಗಳಿಗೆ ನಯಾಪೈಸೆ ಕೂಡ ಬಿಡುಗಡೆಯಾಗಿಲ್ಲ ಎಂದು ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮಾಂತರ ಪ್ರದೇಶಗಳಲ್ಲಿ ಜನ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರೂ ಇದುವರೆಗೂ ಈ ಪ್ರದೇಶಗಳಿಗೆ ಅನುದಾನ ಬಿಡುಗಡೆ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವು ಸಿಗುತ್ತಿಲ್ಲ.

ಕುಡಿಯುವ ನೀರಿಗಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದರೂ ಪ್ರತಿಕ್ರಿಯೆ ಬಂದಿಲ್ಲ. ಒಂದು ವಾರದೊಳಗೆ ಕುಡಿಯುವ ನೀರು ಮತ್ತು ಬರ ಪೀಡಿತ ಪ್ರದೇಶಗಳಿಗೆ ಹಣ ಬಿಡುಗಡೆ ಮಾಡಬೇಕು, ಒಂದು ವೇಳೆ ಈ ಸಮಸ್ಯೆ ಬಗೆಹರಿಸದಿದ್ದರೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸಿ ಅಲ್ಲಿಯೇ ಸೌದೆ ಒಲೆ ಹಚ್ಚಿ ಅಡುಗೆ ಮಾಡಿಕೊಂಡು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ. ಜಿಲ್ಲೆಯಲ್ಲಿ ಅಧಿಕಾರಿಗಳು ಲೂಟಿ ಹೊಡೆಯುತ್ತಿದ್ದಾರೆ. ಯಾವುದೇ ಜನಪರ ಕೆಲಸಗಳನ್ನು ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin