ಸೈನಿಕರ ಆಹಾರ ಗುಣಮಟ್ಟದ ತಪಾಸಣೆಗೆ ತಜ್ಞರ ತಂಡ

ಈ ಸುದ್ದಿಯನ್ನು ಶೇರ್ ಮಾಡಿ

Tej-Bahaddur BSF

ಗುವಾಹಟಿ, ಜ.12-ಯೋಧರಿಗೆ ಪೂರೈಸಲಾಗುತ್ತಿರುವ ಆಹಾರ ಗುಣಮಟ್ಟದ ಬಗ್ಗೆ ತಪಾಸಣೆ ನಡೆಸಿ ದೃಢೀಕರಿಸಲು ದೇಶದ ಎಲ್ಲಾ ಗಡಿ ಠಾಣೆಗಳಿಗೆ ಆಹಾರ ತಜ್ಞರ ತಂಡಗಳನ್ನು ಕಳುಹಿಸಲಾಗುವುದು ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.  ಗಡಿಯಲ್ಲಿರುವ ಯೋಧರಿಗೆ ಕಳಪೆ ಗುಣಮಟ್ಟದ ಆಹಾರ ಪೂರೈಸಲಾಗುತ್ತಿದೆ ಎಂದು ಆರೋಪಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ವಿವಾದ ಸೃಷ್ಟಿಯಾಗಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ.  ಗುವಾಹಟಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಿಜಿಜು, ಯೋಧರು ಮತ್ತು ಅವರ ಸಂತೃಪ್ತಿ ಸರ್ಕಾರದ ಆದ್ಯತೆಯಾಗಿದ್ದು, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಲಾಗುವುದು.

ವಿವಾದಿತ ವಿಡಿಯೋ ಬಗ್ಗೆ ತನಿಖೆ ನಡೆಸಲು ಸರ್ಕಾರ ಈಗಾಗಲೇ ಗಡಿ ಭದ್ರತಾ ಪಡೆಯ ಬ್ರಿಗೇಡಿಯರ್ ಶ್ರೇಣಿಯ ಅಧಿಕಾರಿಯೊಬ್ಬರನ್ನು ನಿಯೋಜಿಸಿದೆ ಎಂದು ತಿಳಿಸಿದರು.
ಈ ವಿಡಿಯೋ ಅಸಲಿಯೇ ಎಂಬ ಬಗ್ಗೆಯೂ ದೃಢಪಡಿಸಲು ಈಗಾಗಲೇ ತನಿಖೆ ಮುಂದುವರಿಸಲಾಗಿದೆ ಎಂದು ಸಚಿವರು ಹೇಳಿದರು.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin