ಮರಕ್ಕೆ ಕಾರು ಡಿಕ್ಕಿ ಹೊಡೆದು ಸ್ಥಳದಲ್ಲೇ ಮೂವರ ದುರ್ಮರಣ

ಈ ಸುದ್ದಿಯನ್ನು ಶೇರ್ ಮಾಡಿ

Acciednt-Car

ಧಾರವಾಡ, ಜ.13- ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಕಲಘಟಗಿ ಸಮೀಪ ಮಂಗೇಶ್‍ಕೆರೆ ಬಳಿ ಸಂಭವಿಸಿದೆ. ನಿರಂಜನ ದೂಪುಗಾರ (26), ಚನ್ನಯ್ಯ ಚರಂತಿಮಠ (25) ಹಾಗೂ ವಿಕಾಸ್ ಚರಂತಿಮಠ (27) ಮೃತಪಟ್ಟ ದುರ್ದೈವಿಗಳು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಸಚಿನ್ ಹಡಪದ್ ಎಂಬುವವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಳಿಯಾಳದಿಂದ ಕಲಘಟಗಿಗೆ ರಾತ್ರಿ ಕಾರಿನಲ್ಲಿ ಬರುವಾಗ ಹುಲಕುಂದಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದಾಗ ಈ ದುರ್ಘಟನೆ ಸಂಭವಿಸಿದೆ. ಕಲಘಟಗಿ ಠಾಣೆಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸಿದ್ದಾರೆ.

Facebook Comments

Sri Raghav

Admin