ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಗುಂಡು ಹಾರಿಸಿಕೊಂಡು ಸಿಐಎಸ್‍ಎಫ್ ಪೇದೆ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

Firing-Suicide

ಬೆಂಗಳೂರು, ಜ.16- ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕರ್ತವ್ಯನಿರತ ಸಿಐಎಸ್‍ಎಫ್‍ನ ಪೇದೆ ಗುಂಡು ಹಾರಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹಾರಾಷ್ಟ್ರದ ವಿಜಯ್ ಸುರೇಶ್ ಗಾಯಕ್ವಾಡ್ (32) ಆತ್ಮಹತ್ಯೆ ಮಾಡಿಕೊಂಡಿರುವ ಸಿಐಎಸ್‍ಎಫ್ ಪೇದೆ. 2009ನೆ ಬ್ಯಾಚ್‍ನಲ್ಲಿ ಸಿಐಎಸ್‍ಎಫ್‍ಗೆ ಪೇದೆಯಾಗಿ ಸೇರ್ಪಡೆಗೊಂಡಿದ್ದ ಸುರೇಶ್ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ರಾತ್ರಿ ಪಾಳಿ ಕರ್ತವ್ಯ ನಿರ್ವಹಿಸಿದ್ದ ಸುರೇಶ್ ಬೆಳಗ್ಗೆ 9 ಗಂಟೆ ಸುಮಾರಿನಲ್ಲಿ ಗೇಟ್ ನಂ.2ರಲ್ಲಿನ ವಾಕ್‍ಟವರ್ ಬಳಿ ತಮ್ಮ ಬಳಿಯಿದ್ದ ರೈಫಲ್‍ನಿಂದ ಗುಂಡು ಹಾರಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪತ್ನಿಗೆ ವಿಚ್ಛೇದನ ನೀಡಿ ಮತ್ತೊಂದು ಮದುವೆಗೆ ಸಜ್ಜಾಗಿದ್ದ ಸುರೇಶ್ ಈ ವಿಚಾರದಲ್ಲಿ ಹಲವು ದಿನಗಳಿಂದ ಬೇಸರದಲ್ಲಿದ್ದರು ಎನ್ನಲಾಗಿದೆ. ಈ ಸಂಬಂಧ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin