ಬರಪೀಡಿತ ಪ್ರದೇಶಗಳಲ್ಲಿ ಪೂರ್ವ ತಯಾರಿಗೆ ಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ

23

ರಾಯಬಾಗ,ಜ.16- ಬರಪೀಡಿತ ಪ್ರದೇಶಗಳಲ್ಲಿ ಅವಶ್ಯವಿರುವಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಿಕೊಳ್ಳುವಂತೆ ಮತ್ತು ಜಾನುವಾರುಗಳಿಗೆ ಮೇವಿನ ಬ್ಯಾಂಕ್ ತೆರೆಯಲು ಪೂರ್ವ ತಯಾರಿ ಮಾಡಿಕೊಳ್ಳಲು ತಹಶೀಲ್ದಾರ ಕೆ.ಎನ್. ರಾಜಶೇಖರ ಅವರಿಗೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಸೂಚಿಸಿದರು. ನಿನ್ನೆ ಮಧ್ಯಾಹ್ನ ತಾಲೂಕಿನ ಬೈಂಡವಾಡ ಮತ್ತು ಗಿರಿನಾಯಿಕವಾಡಿಯಲ್ಲಿ ಬಿಜೆಪಿ ಬರ ಅಧ್ಯಯನ ತಂಡದೊಂದಿಗೆ ಬರ ಪರೀಶಿಲನೆ ನಡೆಸಿ ಮಾತನಾಡಿದ ಅವರು, ಈ ಭಾಗದಲ್ಲಿ ಬಿದ್ದಿರುವ ಬರಗಾಲದಿಂದ ರೈತರು ತತ್ತರಿಸಿದ್ದಾರೆ, ಅವರ ಬೆಳೆಗಳು ಮಳೆಯಾಗದೇ ಒಣಗಿ ಕಮರಿ ಹೋಗುತ್ತಿವೆ ಕಾರಣ ಸರಿಯಾಗಿ ರೈತರ ಬೆಳೆ ನಷ್ಟ ಸಮೀಕ್ಷೆ ಮಾಡಿ ಸರಕಾರಕ್ಕೆ ವರಿದಿಯನ್ನು ಸಲ್ಲಿಸುವಂತೆ ತಿಳಿಸಿದರು.

ನಂತರ ಭೈಂಡವಾಡ ಗ್ರಾಮದ ಪಂಚಾಯತ ಆವರಣದಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡಿದ ಅವರು, ಸತತ ಬರಗಾಲದ ಛಾಯೆಯಿಂದ ರೈತರು ತತ್ತರಿಸಿ ಹೋಗಿದ್ದಾರೆ. ಈ ಕೂಡಲೇ ರಾಜ್ಯ ಸರಕಾರ ಬರಗಾಲ ಕಾಮಗಾರಿ ಕೈಗೊಳ್ಳಬೇಕು, ಉದ್ಯೋಗ ಖಾತ್ರಿ ಯೋಜನೆ ಸರಿಯಾಗಿ ಅನುಷ್ಠಾನಗೊಳ್ಳ ಬೇಕು, ರೈತರ ಸಾಲವನ್ನು ಮನ್ನಾ ಮಾಡಬೇಕು. ಅವಶ್ಯವಿರುವ ಕಡೆಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಹಾಗೂ ಮೇವಿನ ಸಂಗ್ರಹ ಮಾಡಿ, ಕೂಡಲೇ ಮೇವಿನ ಬ್ಯಾಂಕ್ ಸ್ಥಾಪನೆ ಮಾಡಬೇಕೆಂದು ರಾಜ್ಯ ಸರಕಾರವನ್ನು ಒತ್ತಾಯಿಸಿದರು. ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ರೈತರ ಸಾಲ ಮನ್ನಾ ಮಾಡಲು ಮೀನಮೇಷ ಎಣಿಸುತ್ತ, ಕೇಂದ್ರ ಸರಕಾರದತ್ತ ಬೊಟ್ಟು ಮಾಡಿ ತೋರಿಸಿ, ರೈತರ ಮುಂದೆ ಮೊಸಳೆ ಕಣ್ಣಿರು ಸುರಿಸಿ, ರೈತರ ಕಣ್ಣಿಗೆ ಮಣ್ಣೆರೆಚುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಂದಿನ ವಿಧಾನಸೌಧ ಚುನಾವಣೆಯಲ್ಲಿ ನಮ್ಮ ನಾಯಕರಾದ ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರಕಾರ ಅಧಿಕಾರಕ್ಕೆ ಬರುತ್ತದೆ, ಆಗ ರೈತರ ಸಾಲ ಸಂಪೂರ್ಣವಾಗಿ ಸಾಲ ಮನ್ನಾ ಮಾಡಲಾಗುವುದು ಎಂದು ಭರವಸೆ ನೀಡಿದರು. ಶಾಸಕ ಡಿ.ಎಮ್. ಐಹೊಳೆ ಮಾತನಾಡಿ, ತಮ್ಮ ಕ್ಷೇತ್ರಾದಾಂತ್ಯ 17 ಕೆರೆಗಳನ್ನು ತುಂಬಿಸಲು ಸುಮಾರು ರೂ.68 ಕೋಟಿ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಲಾಗಿದೆ. ಕೂಡಲೇ ಇದಕ್ಕೆ ಅನುಮೊದನೆ ಕೊಡುಸುವಂತೆ ಜಗದೀಶ ಶೆಟ್ಟರ ಅವರಲ್ಲಿ ಮನವಿ ಮಾಡಿಕೊಂಡರು. ಇದಕ್ಕೆ ಕೂಡಲೇ ಸ್ಪಂದಿಸಿದ ಶೆಟ್ಟರ ಅವರು, ಈ ಯೋಜನೆಗೆ ಸರಕಾರ ದಿಂದ ಅನುಮೊದನೆ ದೊರಕಿಸಲು ಪ್ರಯತ್ನಿಸುವುದಾಗಿ ಹೇಳಿದರು. ವಿಧಾನಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ, ಅಥಣಿ ಶಾಸಕ ಲಕ್ಷ್ಮಣ ಸವದಿ, ಮಾಜಿ ಸಚಿವ ಶಶಿಕಾಂತ ನಾಯಿಕ, ಮಾಜಿ ಸಂಸದ ಅಮರಸಿಂಹ ಪಾಟೀಲ, ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin