ಮಂತ್ರಿ ಮಾಲ್ ಹಿಂಬದಿ ಗೋಡೆ ಕುಸಿದು ಇಬ್ಬರಿಗೆ ಗಾಯ

ಈ ಸುದ್ದಿಯನ್ನು ಶೇರ್ ಮಾಡಿ

Mantri-scrare--vv

ಬೆಂಗಳೂರು,ಜ.16-ನಗರದ ಮಲ್ಲೇಶ್ವರಂನಲ್ಲಿರುವ ಮಂತ್ರಿ ಸ್ಕೈಯರ್ ಮಾಲ್‍ನ 2ನೇ ಮಹಡಿ ಹಿಂಭಾಗದ ಗೋಡೆ ಕುಸಿತಗೊಂಡು ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಲಕ್ಷ್ಮಮ್ಮ(45) ಸೇರಿ ಮೂವರು ಗಾಯಾಳುಗಳನ್ನು ಕೆ.ಸಿ.ಜನರಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಬಿಬಿಎಂಪಿ ಮೇಯರ್ ಜಿ.ಪದ್ಮಾವತಿ, ಪಾಲಿಕೆ ಆಯುಕ್ತ ಮಂಜುನಾಥ್ ಪ್ರಸಾದ್ ಭೇಟಿ ನೀಡಿ ಘಟನೆ ಕುರಿತು ಮಾಹಿತಿ ಪಡೆದರು. ಮುನ್ನೆಚ್ಚರಿಕಾ ಕ್ರಮವಾಗಿ ಮಂತ್ರಿಮಾಲ್‍ನಲ್ಲಿರುವ ಜನರನ್ನು ಸ್ಥಳಾಂತರಿಸಲಾಗಿದ್ದು, ಗೋಡೆ ಕುಸಿತದ ಸಮೀಪವೇ ಮೆಟ್ರೋ ಹಳಿ ಇರುವುದರಿಂದ ಮೆಟ್ರೋ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ. 7 ವರ್ಷದ ಹಿಂದೆ ನಿರ್ಮಾಣಗೊಂಡಿದ್ದ ಮಂತ್ರಿಮಹಲ್ ಗೋಡೆ ಕುಸಿತಗೊಂಡಿರುವುದಲ್ಲದೆ ಗೋಡೆಯಲ್ಲಿ ಬಿರುಕು ಕಂಡುಬಂದಿದೆ.ಈ ಹಿನ್ನೆಲೆಯಲ್ಲಿ ಮಂತ್ರಿಮಾಲ್ ನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ ಎಂದು ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.

mantri-mahal

ಗೋಡೆ ಕುಸಿತದ ಸುದ್ದಿಯಿಂದಾಗಿ ಮಾಲ್ ನಲ್ಲಿದ್ದ ಸಿಬ್ಬಂದಿಗಳು, ಜನರು ಆತಂಕಕ್ಕೀಡಾಗಿದ್ದು, ಕೆಲಕಾಲ ತೀವ್ರ ಆತಂಕ ಸೃಷ್ಟಿ ಮಾಡಿತ್ತು.ನೀರು ಸರಬರಾಜು ಪೈಪ್ ತುಂಡಾಗಿ 1ರಿಂದ 3ನೇ ಮಹಡಿಯಲ್ಲಿ ನೀರು ತುಂಬಿಕೊಂಡಿತ್ತು. ನೀರು ಸಂಗ್ರಹದಿಂದ ಹಿಂಭಾಗದ ಗೋಡೆ ಕುಸಿದಿದ್ದು, ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಅಲ್ಲದೆ ಮತ್ತಷ್ಟು ಗೋಡೆ ಕುಸಿಯುವ ಸಾಧ್ಯತೆ ಇದೆ ಎಂದು ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ತಿಳಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin