ಮಾನಸಿಕ ಅಸ್ವಸ್ಥೆಯ ರೇಪ್ ಮಾಡಿದ ಎಎಸ್‍ಐ ಉಮೇಶ್ ವಿರುದ್ಧ ಅತ್ಯಂತ ಕಠಿಣ ಕ್ರಮ : ಓಂ ಪ್ರಕಾಶ್

ಈ ಸುದ್ದಿಯನ್ನು ಶೇರ್ ಮಾಡಿ

Umesh-Police-Rape-Tumakuru

ಬೆಂಗಳೂರು, ಜ.16- ಮಾನಸಿಕ ಅಸ್ವಸ್ಥೆ ಮೇಲೆ ಅತ್ಯಾಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಸ್‍ಐ ವಿರುದ್ಧ ಕಾನೂನು ರೀತಿಯಲ್ಲಿ ಅತ್ಯಂತ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಇಂದಿಲ್ಲಿ ಹೇಳಿದರು.  ವಿಧಾನಸೌಧದ ಎದುರು ಹೆದ್ದಾರಿ ಗಸ್ತು ವಾಹನಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರಿನಲ್ಲಿ ಮಾನಸಿಕ ಅಸ್ವಸ್ಥೆ ಮೇಲೆ ಎಎಸ್‍ಐ ಒಬ್ಬರು ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಖಾರವಾಗಿ ಪ್ರತಿಕ್ರಿಯಿಸಿದ ಅವರು, ಅಮಾನತು ಕ್ರಮ ಅಷ್ಟೇ ಅಲ್ಲ, ಇನ್ನೂ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ.

ಕಾನೂನು ಪ್ರಕಾರ ಅದನ್ನು ಮಾಡಬೇಕು ಎಂದು ಹೇಳಿದರು. ಅತ್ಯಾಚಾರವಾಗಿರುವುದು ವೈದ್ಯಕೀಯ ವರದಿಯಿಂದ ದೃಢಪಟ್ಟಿದೆ. ಎಎಸ್‍ಐಅನ್ನು ಬಂಧಿಸಿ ತನಿಖೆ ನಡೆಸಬೇಕು ಎಂದು ಪತ್ರಕರ್ತರ ಪ್ರಶ್ನೆಗೆ ಗರಂ ಆಗಿ ಪ್ರತಿಕ್ರಿಯಿಸಿದ ಡಿಜಿ ಮತ್ತು ಐಜಿ ಅವರು ಅರೆಸ್ಟ್ ಮಾಡುವುದು ಅಷ್ಟೇ ಅಲ್ಲ, ಹೆಚ್ಚಿನ ಕ್ರಮ ಕೈಗೊಳ್ಳಬೇಕಾಗುತ್ತದೆ. ಕಾನೂನು ಪ್ರಕಾರ ಅದನ್ನೆಲ್ಲ ಮಾಡಬೇಕು ಎಂದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin