ರಾಯಚೂರಲ್ಲಿ ಬಸ್ನಲ್ಲಿ ಬಾಂಬ್ ಪತ್ತೆಯಾದ ಪ್ರಕರಣ : ಮೂವರು ವಶಕ್ಕೆ, ತೀವ್ರ ವಿಚಾರಣೆ
ರಾಯಚೂರು, ಜ.16- ಸರ್ಕಾರಿ ಬಸ್ನಲ್ಲಿ ಬಾಂಬ್ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಜನರನ್ನು ವಶಕ್ಕೆ ಪಡೆದಿರುವ ರಾಯಚೂರು ಪೊಲೀಸರು ವಿಚಾರಣೆಯನ್ನು ತೀವ್ರಗೊಳಿಸಿದ್ದಾರೆ. ಬೆಂಗಳೂರು ಮೂಲದ ಈ ಮೂವರನ್ನು ರಾಯಚೂರು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆಗಂತುಕರಿಗೆ ಸಿಮ್ ಮಾರಾಟ ಮಾಡಿದ ಆರೋಪದ ಮೇಲೆ ಈ ಮೂವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಇವರ ಬಳಿ ಸಿಮ್ ಖರೀದಿಸಿದ ಆಗಂತುಕ ಎರಡು ಬಾರಿ ಪೊಲೀಸ್ ಕಂಟ್ರೋಲ್ ರೂಂಗೆ ಮತ್ತು ಒಂದು ಸಲ ಶಕ್ತಿನಗರ ಪೊಲೀಸ್ ಠಾಣೆಗೆ ಕರೆ ಮಾಡಿದ್ದು, ಬಸ್ನಲ್ಲಿ ಬಾಂಬ್ ಇರುವ ಬಗ್ಗೆ ಮಾಹಿತಿ ನೀಡಿದ್ದ.
ಈ ಮಾಹಿತಿ ಆಧರಿಸಿ ಪೊಲೀಸರು ದಾಳಿ ಮಾಡಿದಾಗ ಸರ್ಕಾರಿ ಬಸ್ನಲ್ಲಿ ಬಾಂಬ್ ವಸ್ತುಗಳಿರುವ ಬ್ಯಾಗ್ ಪತ್ತೆಯಾಗಿತ್ತು. ಕೂಡಲೇ ಅದನ್ನು ವಶಕ್ಕೆ ಪಡೆದು ನಿಷ್ಕ್ರಿಯಗೊಳಿಸಲಾಗಿತ್ತು. ಈ ಪ್ರಕರಣದಲ್ಲಿ ಪ್ರಮುಖ ಆರೋಪಿಗಳು ಇನ್ನೂ ಪತ್ತೆಯಾಗಿಲ್ಲ. ಅಂದು ಕಂಟ್ರೋಲ್ರೂಂಗೆ ಮತ್ತು ಪೊಲೀಸ್ ಠಾಣೆಗೆ ಬಂದ ಕರೆ ಸಿಮ್ ಎಲ್ಲಿಂದ ಖರೀದಿಯಾಗಿತ್ತು ಎಂಬ ಜಾಡು ಹಿಡಿದು ಈ ಸಂಬಂಧ ಮೂವರನ್ನು ವಶಕ್ಕೆ ಪಡೆದು ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.
< Eesanje News 24/7 ನ್ಯೂಸ್ ಆ್ಯಪ್ >
Click Here to Download : Android / iOS