ಸಂಪುಟ ವಿಸ್ತರಣೆ ಸದ್ಯಕ್ಕಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

ಈ ಸುದ್ದಿಯನ್ನು ಶೇರ್ ಮಾಡಿ

siddu

ಬೆಂಗಳೂರು, ಜ.16- ಸಂಪುಟ ವಿಸ್ತರಣೆ ಸದ್ಯಕ್ಕಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ. ಸಿಐಡಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟದಲ್ಲಿ ಖಾಲಿ ಇರುವ ಎರಡು ಸ್ಥಾನಗಳನ್ನು ಭರ್ತಿ ಮಾಡುವ ಚಿಂತನೆ ಸದ್ಯಕ್ಕಿಲ್ಲ ಎಂದು ಹೇಳಿದರು. ರಾಸಲೀಲೆ ಪ್ರಕರಣದಲ್ಲಿ ರಾಜೀನಾಮೆ ನೀಡಿದ ಅಬಕಾರಿ ಸಚಿವ ಎಚ್.ವೈ.ಮೇಟಿ ಹಾಗೂ ಹೃದಯಾಘಾತದಿಂದ ನಿಧನರಾದ ಎಚ್.ಎಸ್.ಮಹದೇವಪ್ರಸಾದ್ ಅವರಿಂದ ತೆರವಾಗಿರುವ ಎರಡು ಸ್ಥಾನಗಳಿಗೆ ಆಕಾಂಕ್ಷಿಗಳು ತೆರೆ ಮರೆಯಲ್ಲಿ ಲಾಬಿ ನಡೆಸುತ್ತಿದ್ದಾರೆ.  ಹಿರಿಯ ಶಾಸಕರು ಮುಖ್ಯಮಂತ್ರಿಗಳ ಮೇಲೆ ಒತ್ತಡ ತಂದು ಸಚಿವರಾಗುವ ಪ್ರಯತ್ನ ಮುಂದುವರೆಸಿದ್ದರು.

ಮುಂಬರುವ ವಿಧಾನಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಖಾಲಿ ಇರುವ ಎರಡು ಸ್ಥಾನಗಳನ್ನು ಮುಖ್ಯ ಮಂತ್ರಿಗಳು ಭರ್ತಿ ಮಾಡಬೇಕೆಂದು ಆಗ್ರಹಿಸಿದ್ದರು.  ಉತ್ತರ ಕರ್ನಾಟಕದ ಕುರುಬ ಸಮುದಾಯದವರಿಗೆ ಮೇಟಿ ಅವರಿಂದ ತೆರವಾಗಿರುವ ಸ್ಥಾನ ನೀಡಬೇಕು ಮತ್ತು ಮಹದೇವಪ್ರಸಾದ್ ಅವರಿಂದ ತೆರವಾಗಿರುವ ಸ್ಥಾನವನ್ನು ಲಿಂಗಾಯತರಿಗೆ ನೀಡಬೇಕು ಎಂಬ ಆಗ್ರಹ ಕೇಳಿಬಂದಿತ್ತು.  ಆದರೆ ಮುಖ್ಯಮಂತ್ರಿಗಳು ಸಚಿವ ಸಂಪುಟ ವಿಸ್ತರಣೆ ಸದ್ಯಕ್ಕಿಲ್ಲ ಎಂದು ಹೇಳಿರುವುದರಿಂದ ಆಕಾಂಕ್ಷಿಗಳ ಆಸೆಗೆ ತಣ್ಣೀರೆರಚಿದಂತಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin