ಕೊಪ್ಪಳ : ನಿದ್ರೆ ಮಾತ್ರೆ ಸೇವಿಸಿ ಮಹಿಳಾ ಹೆಲ್ತ್ ಇನ್ಸ್ಪೆಕ್ಟರ್ ಆತ್ಮಹತ್ಯೆ
ಕೊಪ್ಪಳ,ಜ.17- ನಗರಸಭೆ ಮಹಿಳಾ ಸೀನಿಯರ್ ಹೆಲ್ತ್ ಇನ್ಸ್ಪೆಕ್ಟರ್ವೊಬ್ಬರು ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ನಡೆದಿದೆ. ನಗರದ ಪದಕಿ ಲೇಔಟ್ನಲ್ಲಿ ವಾಸವಾಗಿರುವ ಮಂಜುಳಾ(26) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳಾ ಹೆಲ್ತ್ ಇನ್ಸ್ಪೆಕ್ಟರ್. ತುಮಕೂರು ಮೂಲದ ಮಂಜುಳಾ ಅವರು ಕೊಪ್ಪಳದಲ್ಲಿ ಹೆಲ್ತ್ ಇನ್ಸ್ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಮೊಬೈಲ್ ಕರೆಗೆ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಅನುಮಾನಗೊಂಡ ಪೊಲೀಸರು ಆಕೆಯ ಮನೆಗೆ ಧಾವಿಸಿದ್ದಾರೆ. ಆಗಲೂ ಮನೆಯೊಳಗಿಂದ ಯಾವುದೇ ಪ್ರತಿಕ್ರಿಯೆ ಬರದ ಕಾರಣ ಮನೆ ಬಾಗಿಲು ಒಡೆದು ಒಳ ಹೋಗಿ ನೋಡಿದಾಗ ನಿದ್ರೆ ಮಾತ್ರೆ ಸೇವಿಸಿ ಮಂಜುಳಾ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
< Eesanje News 24/7 ನ್ಯೂಸ್ ಆ್ಯಪ್ >
Click Here to Download : Android / iOS
Facebook Comments