ನಾಳೆಯಿಂದ ಕಲಬುರುಗಿಯಲ್ಲಿ ಬಿಜೆಪಿ ಕಾರ್ಯಕಾರಿಣಿ : ಬ್ರೀಗೇಡ್ ಟಾರ್ಗೆಟ್

ಈ ಸುದ್ದಿಯನ್ನು ಶೇರ್ ಮಾಡಿ
ನಾಳೆಯಿಂದ ನಡೆಯಲಿರುವ ಭಾರತೀಯ ಜನತಾ ಪಾರ್ಟಿಯ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳಲು ಇ೦ದು ಬೆಳಗ್ಗೆ ಕಲ್ಬುರ್ಗಿಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿಗಳು ಮತ್ತು ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿ.ಎಸ್.ಯಡಿಯೂರಪ್ಪನವರನ್ನು ರೈಲ್ವೆ ನಿಲ್ದಾಣದಲ್ಲಿ ಸ್ಥಳೀಯ ಮುಖಂಡರು ಮತ್ತು ಬೃಹತ್ ಸಂಖ್ಯೆಯಲ್ಲಿ ನೆರೆದಿದ್ದ ಕಾರ್ಯಕರ್ತರು ಜಯಘೋಷಗಳೊಂದಿಗೆ ಆತ್ಮೀಯವಾಗಿ ಸ್ವಾಗತಿಸಿದರು.
ನಾಳೆಯಿಂದ ನಡೆಯಲಿರುವ ಭಾರತೀಯ ಜನತಾ ಪಾರ್ಟಿಯ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳಲು ಇ೦ದು ಬೆಳಗ್ಗೆ ಕಲ್ಬುರ್ಗಿಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿಗಳು ಮತ್ತು ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿ.ಎಸ್.ಯಡಿಯೂರಪ್ಪನವರನ್ನು ರೈಲ್ವೆ ನಿಲ್ದಾಣದಲ್ಲಿ ಸ್ಥಳೀಯ ಮುಖಂಡರು ಮತ್ತು ಬೃಹತ್ ಸಂಖ್ಯೆಯಲ್ಲಿ ನೆರೆದಿದ್ದ ಕಾರ್ಯಕರ್ತರು ಜಯಘೋಷಗಳೊಂದಿಗೆ ಆತ್ಮೀಯವಾಗಿ ಸ್ವಾಗತಿಸಿದರು.

ಬೆಂಗಳೂರು,ಜ.20– ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ಮುಖಂಡ ಕೆ.ಎಸ್.ಈಶ್ವರಪ್ಪ ನಡುವಿನ ಗುದ್ದಾಟ ನಿರ್ಣಾಯಕ ಹಂತ ತಲುಪಿರುವ ಹಂತದಲ್ಲೇ ನಾಳೆಯಿಂದ ಕಲಬುರುಗಿಯಲ್ಲಿ ಕಾರ್ಯಕಾರಿಣಿ ಸಭೆ ನಡೆಯಲಿದೆ. ನಾಳೆಯಿಂದ ಎರಡು ದಿನ ಸೇಡಂ ರಸ್ತೆಯ ಹಾರಕೂಡ ಕಲ್ಯಾಣ ಮಂಟಪದಲ್ಲಿ ಸಮಾವೇಶ ಆಯೋಜಿಸಲಾಗಿದ್ದು, ಕಾರ್ಯಕಾರಿಣಿಯಲ್ಲಿ ಪ್ರಮುಖವಾಗಿ ಪಕ್ಷದ ಸಂಘಟನೆಗಿಂತ ಸಂಗೊಳ್ಳಿ ರಾಯಣ್ಣ ಬ್ರೀಗೇಡ್ ವಿವಾದವೇ ಚರ್ಚೆಯ ಕೇಂದ್ರ ಬಿಂದುವಾಗಲಿದೆ. ಪರಸ್ಪರ ಒಬ್ಬರ ಮುಖ ಇನ್ನೊಬ್ಬರು ನೋಡದಷ್ಟು ದೂರು ಸರಿದು, ಕತ್ತಿ ಮಸೆಯುತ್ತಿರುವುದರಿಂದ ಸಭೆ ಯಶಸ್ವೀಯಾಗಲಿದಿಯೇ ಎಂಬ ಯಕ್ಷ ಪ್ರಶ್ನೆ ಎದುರಾಗಿದೆ.

ನಿನ್ನೆ ಭಿನ್ನಮತೀಯರ ಸಭೆಯನ್ನು ಸ್ವತಃ ಯಡಿಯೂರಪ್ಪ ಕರೆದಿದ್ದರೂ ಈಶ್ವರಪ್ಪ ಬಣ ಗೈರು ಹಾಜರಾಗಿದ್ದು, ಬಿಎಸ್‍ವೈ ಕಣ್ಣು ಇನ್ನಷ್ಟು ಕೆಂಪಾಗುವಂತೆ ಮಾಡಿದೆ. ತಮ್ಮ ನಾಯಕತ್ವದ ವಿರುದ್ದ ಬಂಡೆದ್ದಿರುವವರನ್ನು ಪಕ್ಷದಿಂದಲೇ ಹೊರಹಾಕಬೇಕೆಂಬ ದೃಢನಿರ್ಧಾರಕ್ಕೆ ಬಂದಿದ್ದರೂ ಹೈಕಮಾಂಡ್ ಅವರ ಕೈ ಕಟ್ಟಿ ಹಾಕಿರುವುದು ಗುಟ್ಟಾಗಿ ಉಳಿದಿಲ್ಲ. ಸಭೆಯಲ್ಲಿ ಪ್ರಮುಖವಾಗಿ ತೊಗರಿಗೆ ಬೆಂಬಲ ಬೆಲೆ, 371(ಜೆ) ಸರ್ಮಪಕ ಅನುಷ್ಠಾನದಲ್ಲಿನ ನ್ಯೂನತೆ ಸೇರಿದಂತೆ ಈ ಭಾಗದ ಹಲವು ಸಮಸ್ಯೆಗಳ ಕುರಿತು ಚರ್ಚೆ ನಡೆಸಿ ಸರ್ಕಾರದ ಗಮನಕ್ಕೆ ತರುವ ಸಾಧ್ಯತೆಯಿದೆ. ಕೇಂದ್ರ ಸರ್ಕಾರ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ಜನಸಾಮಾನ್ಯರಲ್ಲಿ ಯೋಜನೆಗಳ ಮಾಹಿತಿ ಕೊಂಡೊಯ್ಯುವುದು ಸೇರಿದಂತೆ ಪಕ್ಷದ ಸಂಘಟನೆ ಕುರಿತು ಚರ್ಚೆ ನಡೆಯಲಿದೆ. ಅಲ್ಲದೆ ಮುಖ್ಯವಾಗಿ ಪಕ್ಷದ ಸಂಘಟನೆ, ಮುಂಬರುವ ನಂಜನಗೂಡು, ಹಾಗೂ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ, ಬರದಿಂದ ತತ್ತರಿಸಿರುವ ರಾಜ್ಯಕ್ಕೆ ಕೇಂದ್ರದಿಂದ ಹೆಚ್ಚಿನ ಅನುದಾನ ನೀಡಲು ಒತ್ತಾಯ, ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಪ್ರಚಾರಕ್ಕೆ ತೆರಳುವುದು ಸೇರಿದಂತೆ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳುವ ಸಾಧ್ಯತೆಯಿದೆ.

ಸುಮಾರು ಐದಿನೈದು ವರ್ಷಗಳ ನಂತರ ಕಲಬುರಗಿಯಲ್ಲಿ ನಡೆಯುತ್ತಿರುವ ಕಾರ್ಯಕಾರಿಣಿ ಸಭೆಗೆ ಕೇಂದ್ರ ಸಚಿವರಾದ ಅನಂತ್‍ಕುಮಾರ್, ಡಿ.ವಿ.ಸದಾನಂದಾಗೌಡ, ರಮೇಶ್ ಜಿಗಜಿಣಗಿ, ನಿರ್ಮಲ ಸೀತಾರಾಮನ್, ಪ್ರಮುಖರಾದ ಜಗದೀಶ್ ಶೆಟ್ಟರ್, ಈಶ್ವರಪ್ಪ, ಪ್ರಹ್ಲಾದ್ ಜೋಶಿ, ಸೇರಿದಂತೆ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಸಚಿವರು , ಮಾಜಿ ಶಾಸಕರು, ಜಿಲ್ಲಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಸೇರಿದಂತೆ 650 ಜನ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ಈ ಹಿಂದೆ ಕುಂದಾನಗರಿ ಬೆಳಗಾವಿಯಲ್ಲಿ ನಡೆದ ಕಾರ್ಯಕಾರಿಣಿಯಲ್ಲಿ ಪಕ್ಷದ ಪ್ರಮುಖರೆಲ್ಲರೂ ಒಗ್ಗಟ್ಟು ಪ್ರದರ್ಶಿಸಿದ್ದರಿಂದ ಯಶಸ್ಸಿಯಾಗಿತ್ತು. ಕೇವಲ ಮೂರ್ನಾಲ್ಕು ತಿಂಗಳ ಅವಧಿಯಲ್ಲಿ ಯಡಿಯೂರಪ್ಪ- ಈಶ್ವರಪ್ಪ ನಡುವಿನ ಸಂಬಂಧ ಹಾವು ಮುಂಗುಸಿಯುಂತಾಗಿದೆ. ಇಬ್ಬರ ನಡುವಿನ ಕಾದಾಟ ಜಿಲ್ಲೆಗಳಲ್ಲೂ ಎರಡು ಬಣಗಳನ್ನು ಸೃಷ್ಟಿಸಿದೆ. ಸ್ವತಃ ತವರು ಜಿಲ್ಲೆ ಶಿವಮೊಗ್ಗದಲ್ಲೇ ಉಭಯ ನಾಯಕರ ನಡುವಿನ ಬೆಂಬಲಿಗರು ಪರಸ್ಪರ ಹೊಡೆದಾಡಿಕೊಂಡಿದ್ದರು. ಹೀಗೆ ಮುನಿಸಿಕೊಂಡಿರವವರು ಹಸ್ತಲಾಘವ ಮಾಡಲಿದ್ದಾರೆಂಬುದನ್ನು ಕಾದು ನೋಡಬೇಕು.
ಆದರೆ, ಬ್ರಿಗೇಡ್‍ನೊಂದಿಗೆ ಗುರುತಿಸಿಕೊಂಡವರಿಗೆ ಬಿಜೆಪಿ ಸಮಾವೇಶಕ್ಕೆ ಅಹ್ವಾನ ನೀಡಿಲ್ಲ. ಹೀಗಾಗಿ ಅಂದು ಸಮಾವೇಶದಿಂದ ದೂರು ಉಳಿದುಕೊಳ್ಳಲು ಮತ್ತು ಬಿಜೆಪಿ ರಾಜ್ಯಧ್ಯಕ್ಷ ಬಿ.ಎಸ್.ಯಡುಯೂರಪ್ಪ ಅವರ ಮುಂದೆ ತಮ್ಮ ನೋವು ತೋಡಿಕೊಳ್ಳಲು ಹಿಂದುಳಿದ ವರ್ಗಗಳ ನಾಯಕರು ತಿರ್ಮಾನಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin