ವಾಯುಭಾರ ಕುಸಿತದಿಂದ ರಾಜ್ಯದ ಹಲವೆಡೆ ಹಗುರ ಮಳೆಯಾಗುವ ಸಾಧ್ಯತೆ

ಈ ಸುದ್ದಿಯನ್ನು ಶೇರ್ ಮಾಡಿ

Rain-Bengaluru

ಬೆಂಗಳೂರು, ಜ.21- ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ನಿನ್ನೆಯಿಂದ ಮೋಡ ಕವಿದ ವಾತಾವರಣ ಕಂಡು ಬರುತ್ತಿದೆ.
ನಾಳೆಯವರೆಗೂ ಮೋಡ ಮುಸುಕಿದ ವಾತಾವರಣ ಮುಂದುವರೆಯಲಿದ್ದು, ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆಗಳಿವೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎ.ಶ್ರೀನಿವಾಸರೆಡ್ಡಿ ತಿಳಿಸಿದರು.  ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಇಂದು ಮತ್ತು ನಾಳೆ ತಮಿಳುನಾಡಿನಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಇದರ ಪರಿಣಾಮವು ರಾಜ್ಯದ ಮೇಲೆ ಆಗುತ್ತಿದ್ದು, ನಾಳೆಯವರೆಗೂ ಮೋಡ ಮುಸುಕಿದ ವಾತಾವರಣ ಕಂಡು ಬರಲಿದೆ.

ಚಳಿಯ ಪ್ರಮಾಣ ಇಳಿಕೆಯಾಗುತ್ತಿದ್ದು, ಜನವರಿ ಅಂತ್ಯದ ವೇಳೆಗೆ ಮತ್ತಷ್ಟು ಕಡಿಮೆಯಾಗಲಿದೆ. ಈ ಬಾರಿ ಬೇಸಿಗೆಯಲ್ಲಿ ಬಿಸಿ ಗಾಳಿ ಹೆಚ್ಚಾಗುವ ಲಕ್ಷಣಗಳು ಕಂಡುಬರುತ್ತಿದೆ ಎಂದು ಅವರು ತಿಳಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin