ಈ ಜನ್ಮದಲ್ಲಿ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಒಪ್ಪುವ ಪ್ರಶ್ನೆಯೇ ಇಲ್ಲ : ಯಡಿಯೂರಪ್ಪ

ಈ ಸುದ್ದಿಯನ್ನು ಶೇರ್ ಮಾಡಿ

Yadiyurappa

ಕಲಬುರುಗಿ, ಜ.22- ಈ ಜನ್ಮದಲ್ಲಿ ನಾನು ಬ್ರಿಗೇಡ್ ಒಪ್ಪುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ಹೇಳಿದ್ದಾರೆ.  ಸಂಗೊಳ್ಳಿರಾಯಣ್ಣ ಬ್ರಿಗೇಡ್ ಹೆಸರಿನಲ್ಲಿ ಭಿನ್ನಮತೀಯ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಇದರಿಂದ ಪಕ್ಷಕ್ಕೂ ಧಕ್ಕೆಯಾಗುತ್ತಿದೆ. ಯಾವುದೇ ಕಾರಣಕ್ಕೂ ಇದನ್ನು ಒಪ್ಪಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಖಡಕ್ ಮಾತಿನಲ್ಲಿ ಎದುರಾಳಿಗಳಿಗೆ ಎಚ್ಚರಿಕೆ ನೀಡಿದ್ದಾರೆ.  ರಾಜ್ಯ ಕಾರ್ಯಕಾರಿಣಿ ಸಭೆಯಲ್ಲೂ ಇದರ ಬಗ್ಗೆ ಸ್ಪಷ್ಟ ಸಂದೇಶ ನೀಡಲಾಗಿದೆ. ಆದಾಗ್ಯೂ ಅಬ್ಜಲ್‍ಪುರದಲ್ಲಿ ಬ್ರಿಗೇಡ್ ಸಭೆ ನಡೆಸಲು ಕೆಲವರು ಪ್ರಯತ್ನಿಸುತ್ತಿದ್ದಾರೆ. ಪಕ್ಷಕ್ಕೆ ಮುಜುಗರ ತಂದು ಜನರಿಗೂ ತಪ್ಪು ಭಾವನೆ ಮೂಡಿಸಲಾಗುತ್ತಿದೆ.

ಇದನ್ನು ಸಹಿಸಲು ಸಾಧ್ಯವಿಲ್ಲ.  ಈಗಾಗಲೇ ಪದಾಧಿಕಾರಿಗಳು, ಕಾರ್ಯಕರ್ತರು ಬ್ರಿಗೇಡ್ ಸಮಾವೇಶದಲ್ಲಿ ಪಾಲ್ಗೊಳ್ಳಬಾರದು ಎಂದು ಸೂಚಿಸಿದ್ದೇನೆ. ಆದರೂ ಶಿಸ್ತು ಉಲ್ಲಂಘಿಸಿ ಪಕ್ಷಕ್ಕೆ ಧಕ್ಕೆ ಉಂಟು ಮಾಡುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು.  ರಾಷ್ಟ್ರೀಯ ನಾಯಕರು ಸೂಕ್ತ ಸಮಯದಲ್ಲಿ ಇದರ ಬಗ್ಗೆ ಸೂಕ್ತ ಕ್ರಮ ಕೈಗೊಂಡು ಸಮಸ್ಯೆಯನ್ನು ಬಗೆಹರಿಸುತ್ತಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಸಣ್ಣಪುಟ್ಟ ಅಸಮಾಧಾನಗಳು ಇರಬಹುದು. ಆದರೆ, ಇದನ್ನು ಬಗೆಹರಿಸಲು ಸೂಕ್ತ ವೇದಿಕೆ ಹಾಗೂ ಕಾಲವಕಾಶವಿದೆ. ಆದರೆ, ಭಿನ್ನಮತ ಚಟುವಟಿಕೆಗಳನ್ನು ನಡೆಸುವುದು ಸರಿಯಲ್ಲ. ರಾಜ್ಯದಲ್ಲಿ ಬರಗಾಲವಿದೆ. ಸರ್ಕಾರ ಜನರಿಗೆ ಯಾವುದೇ ರೀತಿಯಲ್ಲೂ ಸ್ಪಂದನೆ ನೀಡುತ್ತಿಲ್ಲ. ಇದರ ವಿರುದ್ಧ ನಾವು ಹೋರಾಟ ಮಾಡಬೇಕಾಗಿದೆ ಎಂದು ತಿಳಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin