ಇಂದು ರಾತ್ರಿ ಮೋದಿ ಜೊತೆ ದೂರವಾಣಿ ಸಂಭಾಷಣೆ ನಡೆಸಲಿದ್ದಾರೆ ಟ್ರಂಪ್

ಈ ಸುದ್ದಿಯನ್ನು ಶೇರ್ ಮಾಡಿ

Modi-and-Trump

ವಾಷಿಂಗ್ಟನ್, ಜ.24- ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಂದು ರಾತ್ರಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೂರವಾಣಿ ಮೂಲಕ ಚರ್ಚೆ ನಡೆಸಲಿದ್ದಾರೆ ಎಂದು ಶ್ವೇತಭವನದ ಪ್ರಕಟಣೆ ತಿಳಿಸಿದೆ. ಟ್ರಂಪ್ ಅವರು ಮೋದಿ ಅವರೊಂದಿಗೆ ವಾಷಿಂಗ್ಟನ್ ಕಾಲಮಾನ ಮಧ್ಯಾಹ್ನ 1 ಗಂಟೆಗೆ (ಭಾರತದಲ್ಲಿ ರಾತ್ರಿ 11.30) ದೂರವಾಣಿ ಮೂಲಕ ಸಂಭಾಷಣೆ ನಡೆಸಲಿದ್ದಾರೆ ಎಂದು ಹೇಳಿರುವ ಉನ್ನತಾಧಿಕಾರಿಗಳು ಯಾವ ವಿಷಯಗಳ ಬಗ್ಗೆ ಮಾತುಕತೆ ನಡೆಯಲಿದೆ ಎಂಬುದನ್ನು ತಿಳಿಸಿಲ್ಲ.  ಅಮೆರಿಕದ 45ನೇ ಅಧ್ಯಕ್ಷರಾಗಿ ಜ.20ರಂದು ಪದಗ್ರಹಣ ಮಾಡಿದ ಬಳಿಕ ಟ್ರಂಪ್ ದೂರವಾಣಿ ಮೂಲಕ ಸಂಭಾಷಣೆ ನಡೆಸಿದ ಐದನೇ ರಾಷ್ಟ್ರನಾಯಕ ಎಂಬ ವಿಶೇಷತೆಗೆ ಮೋದಿ ಪಾತ್ರರಾಗಲಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin