ಕಂಬಳಕ್ಕೆ ಆಗ್ರಹಿಸಿ ನಾಳೆ ವಾಟಾಳ್ ನೇತೃತ್ವದಲ್ಲಿ ರಾಜಭವನಕ್ಕೆ ಮುತ್ತಿಗೆ

ಈ ಸುದ್ದಿಯನ್ನು ಶೇರ್ ಮಾಡಿ

Vatal-nagraj

ಬೆಂಗಳೂರು, ಜ.24-ತಮಿಳುನಾಡಿಗೊಂದು ನ್ಯಾಯ, ಕರ್ನಾಟಕಕ್ಕೊಂದು ನ್ಯಾಯ ಎಂಬ ಧೋರಣೆ ಅನುಸರಿಸುತ್ತಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ರಾಜ್ಯದ ಸಂಪ್ರದಾಯಿಕ ಕ್ರೀಡೆಯಾದ ಕಂಬಳಕ್ಕೆ ಅನುಮತಿ ನೀಡಬೇಕೆಂದು ಆಗ್ರಹಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಒಕ್ಕೂಟ ನಾಳೆ ರಾಜಭವನ ಮುತ್ತಿಗೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಜಲ್ಲಿಕಟ್ಟಿಗೆ ಸುಗ್ರೀವಾಜ್ಞೆ ಮೂಲಕ ತಮಿಳುನಾಡಿಗೆ ಬೆಂಬಲ ನೀಡಿದ ಕೇಂದ್ರ ಸರ್ಕಾರ, ರಾಜ್ಯದ ಕಂಬಳ ಕ್ರೀಡೆಗೂ ಕಾಯ್ದೆ ತಿದ್ದುಪಡಿ ಮಾಡಿ ಅನುಮತಿ ಕೊಡಬೇಕು ಎಂದು ವಾಟಾಳ್ ಆಗ್ರಹಿಸಿದರು.

ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕ ರಾಜ್ಯವನ್ನು ತೀವ್ರ ಕಡಗಣನೆ ಮಾಡುತ್ತಿದ್ದಾರೆ. ಭಾರತದ ಭೂಪಟದಲ್ಲಿ ಕರ್ನಾಟಕ ರಾಜ್ಯ ಇಲ್ಲವೇನೋ ಎಂಬ ಭಾವನೆ ಸೃಷ್ಟಿಯಾಗುತ್ತಿದೆ. ಕಾವೇರಿ ವಿವಾದದಲ್ಲಿ ರಾಜ್ಯಕ್ಕೆ ತೀವ್ರ ಅನ್ಯಾಯವಾಯಿತು. ಮಹದಾಯಿಯಲ್ಲಿ ಪ್ರಧಾನಿಯವರು ಮಧ್ಯಸ್ಥಿಕೆ ವಹಿಸಿ ಸಮಸ್ಯೆ ಬಗೆಹರಿಸಬಹುದಿತ್ತು. ಆದರೆ ರಾಜ್ಯದ ಪರವಾಗಿ ನಿಲ್ಲಲಿಲ್ಲ. ಬರ ಪರಿಹಾರ ನೀಡುವಲ್ಲೂ ರಾಜ್ಯಕ್ಕೆ ತೀವ್ರ ಅನ್ಯಾಯ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು. ಈ ಎಲ್ಲಾ ಬೇಡಿಕೆಗಳನ್ನು ಈಡೇರಿಸಬೇಕೆಂದು ಕನ್ನಡ ಒಕ್ಕೂಟದ ಮುಖಂಡರಾದ ಸಾ.ರಾ.ಗೋವಿಂದು, ಕೆ.ಆರ್.ಕುಮಾರ್, ಶಿವರಾಮೇಗೌಡ, ಪ್ರವೀಣ್‍ಶೆಟ್ಟಿ, ಮಂಜುನಾಥ್‍ದೇವು ಅವರ ನೇತೃತ್ವದಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳೊಂದಿಗೆ ನಾಳೆ ರಾಜಭವನ ಮುತ್ತಿಗೆ ಹಾಕುವ ಮೂಲಕ ಪ್ರತಿಭಟನೆಯನ್ನು ನಡೆಸುವುದಾಗಿ ವಾಟಾಳ್ ತಿಳಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin