ಕಾಶ್ಮೀರದ ಗಂದೆರ್‍ಬಲ್‍ನಲ್ಲಿ ನಡೆದ ಎನ್‍ಕೌಂಟರ್‍ನಲ್ಲಿ ಉಗ್ರ ಬಲಿ

ಈ ಸುದ್ದಿಯನ್ನು ಶೇರ್ ಮಾಡಿ

Firing

ಶ್ರೀನಗರ, ಜ.24-ಜಮ್ಮು ಮತ್ತು ಕಾಶ್ಮೀರದ ಗಂದೆರ್‍ಬಲ್‍ನಲ್ಲಿ ಭದ್ರತಾಪಡೆಗಳೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಉಗ್ರಗಾಮಿಯೊಬ್ಬ ಹತನಾಗಿದ್ದಾನೆ. ಗಂದೆರ್‍ಬಲ್ ಜಿಲ್ಲೆಯ ಹಡೂರ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ದೊರೆತ ಖಚಿತ ಸುಳಿವಿನ ಮೇಲೆ ಭದ್ರತಾಪಡೆಗಳು ನಿನ್ನೆ ರಾತ್ರಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾಗ ಉಗ್ರರು ಗುಂಡು ಹಾರಿಸಿದರು. ಈ ಸಂದರ್ಭದಲ್ಲಿ ನಡೆದ ಪ್ರತಿದಾಳಿ ಮತ್ತು ಎನ್‍ಕೌಂಟರ್‍ನಲ್ಲಿ ಒಬ್ಬ ಉಗ್ರ ಹತನಾಗಿದ್ದಾನೆ ಎಂದು ಹಿರಿಯ ಸೇವಾಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲಿ ಅಡಗಿರಬಹುದಾದ ಇತರ ಉಗ್ರರಿಗಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಸಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin