ಮುಂದಿನ ಶೈಕ್ಷಣಿಕ ವರ್ಷದಿಂದ ಪರಿಷ್ಕೃತ ಪಠ್ಯ : ಸಚಿವ ತನ್ವೀರ್ ಸೇಠ್

ಈ ಸುದ್ದಿಯನ್ನು ಶೇರ್ ಮಾಡಿ

Tanveer-Sait

ಬೆಂಗಳೂರು, ಜ.24-ಮುಂದಿನ ಶೈಕ್ಷಣಿಕ ಸಾಲಿನಿಂದ ಪರಿಷ್ಕೃತ ಪಠ್ಯಪುಸ್ತಕ ಜಾರಿಗೆ ಬರಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಠ್ಯಪುಸ್ತಕ ಮುದ್ರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ತಿಳಿಸಿದರು.  ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ 27ಸಮಿತಿಗಳು ಸರ್ಕಾರಕ್ಕೆ ವರದಿ ಕೊಟ್ಟಿದ್ದು, ಪರಿಶೀಲಿಸಲಾಗುತ್ತಿದೆ. ಮುಂದಿನ ಶೈಕ್ಷಣಿಕ ಸಾಲಿನಲ್ಲಿ ಜೂನ್ ವೇಳೆಗೆ ಪಠ್ಯಪುಸ್ತಕ ಒದಗಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು. ಒಂದನೇ ತರಗತಿಯಿಂದ 10ನೆ ತರಗತಿಯವರೆಗೆ ಪರಿಷ್ಕøತ ಪಠ್ಯಪುಸ್ತಕ ಜಾರಿಗೆ ಬರಲಿದೆ. 1 ರಿಂದ 8ನೆ ತರಗತಿವರೆಗೆ ಪರಿಷ್ಕøತ ಪಠ್ಯಪುಸ್ತಕ ನೀಡಲಾಗುವುದು. 9 ಮತ್ತು 10ನೆ ತರಗತಿಗೆ ಎನ್‍ಸಿಆರ್‍ಟಿ ಪಠ್ಯಕ್ರಮ ಜಾರಿಗೆ ಬರಲಿದೆ ಎಂದರು.

ಪಠ್ಯ ಪರಿಷ್ಕರಣೆ ಸಂದರ್ಭದಲ್ಲಿ ಮಾನವ ವಿಚಾರಗಳನ್ನು ಯಾವ ಕಾರಣಕ್ಕೆ ಕೈಬಿಡಲಾಗಿದೆ ಮತ್ತು ಯಾವ್ಯಾವ ವಿಚಾರಗಳನ್ನು ಯಾವ ಕಾರಣಕ್ಕೆ ಸೇರ್ಪಡೆ ಮಾಡಲಾಗಿದೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಕಾರಣ ಕೇಳಲಾಗಿದೆ ಎಂದು ತಿಳಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin