ಹೆತ್ತ ತಾಯಿಯ ಶೀಲ ಶಂಕಿಸಿ ಕೊಲೆಗೈದ ಮಗ

ಈ ಸುದ್ದಿಯನ್ನು ಶೇರ್ ಮಾಡಿ

Murder-01

ಕಲಬುರಗಿ, ಜ.24- ತಾಯಿಯ ಶೀಲ ಶಂಕಿಸಿದ ಮಗ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ಲಕ್ಷ್ಮಿಪುರ ಬಡಾವಣೆ ನಿವಾಸಿ ಅನಿತಾ ಬಾಯಿ (45) ಮಗನಿಂದಲೇ ಕೊಲೆಯಾದ ದುರ್ದೈವಿ. ಮನೆಯಲ್ಲಿ ಆಗಿಂದಾಗ್ಗೆ ತಾಯಿಯೊಂದಿಗೆ ಜಗಳವಾಡುತ್ತಿದ್ದ ವಿಜಯ್‍ಕುಮಾರ್ ನಿನ್ನೆ ರಾತ್ರಿಯೂ ಜಗಳ ತೆಗೆದು ತಾಯಿಯ ಶೀಲದ ಬಗ್ಗೆ ಶಂಕೆ ವ್ಯಕ್ತಪಡಿಸಿ ಚಾಕುವಿನಿಂದ ಮನಬಂದಂತೆ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಇಂದು ಮುಂಜಾನೆ ಈ ವಿಷಯ ಬೆಳಕಿಗೆ ಬಂದಿದ್ದು, ಸುದ್ದಿ ತಿಳಿದ ವಾಡಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಶವವನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ವಿಜಯ್‍ಕುಮಾರ್‍ಗಾಗಿ ಬಲೆ ಬೀಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin