68ನೇ ಗಣರಾಜ್ಯೋತ್ಸವದ ಮುಖ್ಯ ಅತಿಥಿ ಯುಎಇ ಯುವರಾಜನಿಗೆ ಮೋದಿ ಆತ್ಮೀಯ ಸ್ವಾಗತ

ಈ ಸುದ್ದಿಯನ್ನು ಶೇರ್ ಮಾಡಿ

Modi

ನವದೆಹಲಿ. ಜ.24 : 68ನೇ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುತ್ತಿರುವ ಯುಎಇ ಯುವರಾಜ ಶೇಖ್ ಮೊಹಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಆತ್ಮೀಯವಾಗಿ ಸ್ವಾಗತಿಸಿದರು. ಬುಧವಾರ ಪ್ರಧಾನಿ ಮೋದಿಯವರನ್ನು ಯುವರಾಜನ ಜೊತೆ ಮಾತುಕತೆ ನಡೆಸಲಿದ್ದಾರೆ.
ಭಾರತದೊಂದಿಗೆ ವಾಣಿಜ್ಯ ಹಾಗೂ ದ್ವಿಪಕ್ಷೀಯ ಬಾಂಧ್ಯವ್ಯ ವೃದ್ಧಿಗೆ ಮಾತುಕತೆ ಚರ್ಚೆ ನಡೆಸಲಿದ್ದಾರೆ. ಭಾರತದಲ್ಲಿ 75 ಬಿಲಿಯನ್ ಡಾಲರ್ ಹೂಡಿಕೆ ಮಾಡಲು ಉನ್ನತ ಮಟ್ಟದ ಮಾತುಕತೆ ಇದೇ ಸಂದರ್ಭದಲ್ಲಿ ನಡೆಯಲಿದೆ. ವಾಣಿಜ್ಯ ಮತ್ತು ಹೂಡಿಕೆ ವಿಷಯಗಳ ಕುರಿತು ಉಭಯ ದೇಶಗಳ ನಾಯಕರು ಹಾಗೂ ಬೃಹತ್ ಉದ್ದಿಮೆದಾರರ ಸಭೆ ನಡೆಸಲಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin