ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ತುಂತುರು ಮಳೆ ಸಾಧ್ಯತೆ

ಈ ಸುದ್ದಿಯನ್ನು ಶೇರ್ ಮಾಡಿ

Rain-01

ಬೆಂಗಳೂರು,ಜ.27- ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮದಿಂದ ರಾಜ್ಯದ ಬಹುತೇಕ ಕಡೆಗಳಲ್ಲಿ ಮೋಡಕವಿದ ವಾತಾವರಣವಿದ್ದು ಆಗಾಗ್ಗೆ ತುಂತುರು ಮಳೆ ಚದುರಿದಂತೆ ಬೀಳುತ್ತಿದೆ. ನಿನ್ನೆ ಕೆಲವೆಡೆ ಸಾಧಾರಣ ಮಳೆಯಾದ ವರದಿಯಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಬಾರ ಕುಸಿತ ಹಾಗೂ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ತಮಿಳುನಾಡು ಹಾಗೂ ಕೇರಳ ರಾಜ್ಯಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನಿರ್ದೇಶಕ ಡಾ.ಶ್ರೀನಿವಾಸ್‍ರೆಡ್ಡಿ ಈ ಸಂಜೆಗೆ ತಿಳಿಸಿದ್ದಾರೆ. ಆದರೆ, ರಾಜ್ಯದಲ್ಲಿ ನಿನ್ನೆಯಿಂದಲೇ ಮೋಡಕವಿದ ವಾತಾವರಣ, ಅಲ್ಲಲ್ಲಿ ಹಗುರ ಮಳೆ ಬೀಳುತ್ತಿದ್ದು, ಇಂದೂ ಕೂಡ ಮುಂದುವರೆಯಲಿದೆ. ಆದರೆ, ಭಾರೀ ಮಳೆಯಾಗುವ ಮುನ್ನೆಚ್ಚರಿಕೆಗಳಿಲ್ಲ. ನಾಳೆ ಸಂಜೆ ವೇಳೆಗೆ ಮೋಡ ತೆರವುಗೊಂಡು ವಾತಾವರಣ ಯಥಾಸ್ಥಿತಿಗೆ ಮರಳುವ ಸಾಧ್ಯತೆಗಳಿವೆ ಎಂದು ಹೇಳಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin