ಘಾಜಿಯಾಬಾದ್‍ನಲ್ಲಿ ಭೀಕರ ರಸ್ತೆ ಅಪಘಾತ, ಸ್ಥಳದಲ್ಲೇ ನಾಲ್ವರು ಸಾವು

ಈ ಸುದ್ದಿಯನ್ನು ಶೇರ್ ಮಾಡಿ

4-Killed-01

ಘಾಜಿಯಾಬಾದ್, ಜ.28-ಅತಿ ವೇಗವಾಗಿ ಬಂದ ಕಾರೊಂದು ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಭೀಕರ ಘಟನೆ ಇಂದು ಮುಂಜಾನೆ ಉತ್ತರಪ್ರದೇಶದ ಘಾಜಿಯಾಬಾದ್‍ನ ಇಂದಿರಾಪುರಂನಲ್ಲಿ ಸಂಭವಿಸಿದೆ. ಈ ಭೀಕರ ಹಿಟ್ ಅಂಡ್ ರನ್‍ಗೆ ಕಾರಣವಾದ ದುಬಾರಿ ಆಡಿ ಕಾರಿನಲ್ಲಿದ್ದವರು ವಾಹನವನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಅಪಘಾತದ ರಭಸಕ್ಕೆ ಆಟೋರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದವರು ಪಾನಮತ್ತರಾಗಿ ಬೇಜವಾಬ್ದಾರಿಯಿಂದ ಈ ಅಪಘಾತ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಕಾರಿನ ನಂಬರ್ ಆಧರಿಸಿ ಪೊಲೀಸರು ಅರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin