ನಿಷೇಧಿತ ಪ್ಲಾಸ್ಟರ್ ಆಫ್ ಪ್ಯಾರೀಸ್ ಘಟಕದ ಮೇಲೆ ದಾಳಿ, ವಿಗ್ರಹಗಳ ನಾಶ

ಈ ಸುದ್ದಿಯನ್ನು ಶೇರ್ ಮಾಡಿ

POP-1
ಬೆಂಗಳೂರು,ಜ.28- ನಗರದ ಹೊರವಲಯದಲ್ಲಿ ನಿಷೇಧಿತ ಪ್ಲಾಸ್ಟರ್ ಆಫ್ ಪ್ಯಾರೀಸ್ ಬಳಸಿ ವಿಗ್ರಹ ತಯಾರಿಸುತ್ತಿದ್ದ ಘಟಕದ ಮೇಲೆ ದಾಳಿ ನಡೆಸಿರುವ ಮಾಲಿನ್ಯ ನಿಯಂತ್ರಣ ಮಂಡಳಿ ಸಾವಿರಾರು ರೂ. ಮೌಲ್ಯದ ಪಿಒಪಿ ವಿಗ್ರಹಗಳನ್ನು ವಶಪಡಿಸಿಕೊಂಡಿದೆ. ಮೈಸೂರು ರಸ್ತೆ ಕುಂಬಳಗೂಡು ಸಮೀಪದ ತಗಚಗುಪ್ಪೆ ಗ್ರಾಮದಲ್ಲಿ ಅಕ್ರಮವಾಗಿ ಪಿಒಪಿ ವಿಗ್ರಹ ತಯಾರಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಹಾಗೂ ಸ್ಥಳೀಯ ಪಿಡಿಒ ಅಕ್ರಮ ವಿಗ್ರಹಗಳನ್ನು ವಶಪಡಿಸಿಕೊಂಡಿದೆ.
ಮಾತ್ರವಲ್ಲ ವಿಗ್ರಹ ತಯಾರಿಕಾ ಘಟಕವನ್ನು ಸಂಪೂರ್ಣವಾಗಿ ನಾಶಪಡಿಸಲಾಗಿದೆ. ಪರಿಸರ ಕಾಪಾಡುವ ಉದ್ದೇಶದಿಂದ ರಾಜ್ಯದಲ್ಲಿ ಪಿಒಪಿ ಉತ್ಪನ್ನಗಳನ್ನು ಈಗಾಗಲೇ ನಿಷೇಧಿಸಲಾಗಿದೆ.

ಆದರೂ ಕೆಲವರು ಅಕ್ರಮವಾಗಿ ವಿಗ್ರಹಗಳನ್ನು ತಯಾರಿಸುತ್ತಿರುವ ಬಗ್ಗೆ ಮಾಹಿತಿಯಿದ್ದು , ಯಾವುದೇ ಸಂದರ್ಭದಲ್ಲಿ ಅಂತಹ ಘಟಕಗಳ ಮೇಲೆ ದಾಳಿ ನಡೆಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

POP-2

POP-3

Facebook Comments

Sri Raghav

Admin