ಲಖನೌನಲ್ಲಿ ನಾಳೆ ರಾಹುಲ್-ಅಖಿಲೇಶ್ ಜಂಟಿ ಪ್ರಚಾರ

ಈ ಸುದ್ದಿಯನ್ನು ಶೇರ್ ಮಾಡಿ

Rahul-Akhilesh

ಲಖನೌ, ಜ.28- ತೀವ್ರ ಕುತೂಹಲ ಕೆರಳಿಸಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಮಹಾಮೈತ್ರಿ ಸಾಧಿಸಿದ ನಂತರ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್‍ಗಾಂಧಿ ಮತ್ತು ಸಮಾಜವಾದಿ ಪಕ್ಷದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ನಾಳೆ ರಾಜಧಾನಿ ಲಖನೌನಲ್ಲಿ ಜಂಟಿ ಪ್ರಚಾರ ಆರಂಭಿಸಲಿದ್ದಾರೆ. ಈ ಇಬ್ಬರೂ ನಾಯಕರು ಒಗ್ಗೂಡಿ ರೋಡ್ ಶೋ ಮೂಲಕ ಪ್ರಚಾರ ಕಾರ್ಯಕ್ಕೆ ಇಳಿದಿರುವುದರಿಂದ ಚುನಾವಣಾ ಕಣ ಮತ್ತಷ್ಟು ರಂಗೇರಿದೆ. ಉತ್ತರ ಪ್ರದೇಶದಲ್ಲಿ ಬಿಜೆಪಿಯೇತರ ಸರ್ಕಾರ ಸ್ಥಾಪನೆಗಾಗಿ ಪಣ ತೊಟ್ಟಿರುವ ರಾಹುಲ್ ಮತ್ತು ಅಖಿಲೇಶ್ ನಾಳೆ ಲಖನೌ ನಗರದ ಪ್ರಮುಖ ಸ್ಥಳಗಳಲ್ಲಿ ರೋಡ್ ಶೋ ಮತ್ತು ಪ್ರಚಾರ ಕಾರ್ಯ ಕೈಗೊಂಡಿದ್ದಾರೆ.  ಉಭಯ ಪಕ್ಷಗಳ ಅಸಂಖ್ಯಾತ ಕಾರ್ಯಕರ್ತರು ಭಾಗವಹಿಸಲಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin