ಡಿವೈಎಸ್ಪಿ ಕಲ್ಲಪ್ಪ ಆತ್ಮಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಖಾಂಡ್ಯ ಗುಲ್ಬರ್ಗ ಜೈಲಿಗೆ

ಈ ಸುದ್ದಿಯನ್ನು ಶೇರ್ ಮಾಡಿ

Praveen-Khandya

ಚಿಕ್ಕಮಗಳೂರು,ಜ.30– ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿ ಪ್ರವೀಣ್ ಖಾಂಡ್ಯ ವಿರುದ್ಧ ಜಿಲ್ಲಾಡಳಿತ ಗೂಂಡಾ ಕಾಯ್ದೆ ಜಾರಿ ಮಾಡಿದೆ.
ಪ್ರವೀಣ್ ಖಾಂಡ್ಯ ವಿರುದ್ಧ ಜಿಲ್ಲೆಯ ವಿವಿಧ ಠಾಣೆಗಳಲ್ಲಿ 33 ಪ್ರಕರಣಗಳು ದಾಖಲಾಗಿದ್ದು , ಹಲವಾರು ಬಾರಿ ಖಾಂಡ್ಯನನ್ನು ಪೊಲೀಸರು ಠಾಣೆಗೆ ಕರೆಸಿ ಎಚ್ಚರಿಕೆ ನೀಡಿದ್ದರೂ ಇವನು ತನ್ನ ನಡವಳಿಕೆಯನ್ನು ಬದಲಾಯಿಸಿಕೊಂಡಿರಲಿಲ್ಲ.   ಸಮಾಜದ ಶಾಂತಿ ಕದಡುವ ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದ. ಇವನ ವಿರುದ್ಧ ಗೂಂಡಾ ಕಾಯ್ದೆ ಪ್ರಯೋಗಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಲಾಗಿತ್ತು.  ಕರ್ನಾಟಕ ಸರ್ಕಾರ ಅಧಿಸೂಚನೆ ಎಚ್.ಡಿ.174 ಎಸ್‍ಎಸ್‍ಟಿ ಆದೇಶದಂತೆ ಪ್ರವೀಣ್ ಖಾಂಡ್ಯನನ್ನು ಬಂಧಿಸಿ ಪೊಲೀಸರ ಬಂದೋಬಸ್ತ್‍ನೊಂದಿಗೆ ಗುಲ್ಬರ್ಗ ಜೈಲಿಗೆ ಕಳುಹಿಸಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin