ನೂತನ ಡಿಜಿಪಿಯಾಗಿ ಅಧಿಕಾರ ವಹಿಸಿಕೊಂಡ ರೂಪಕ್ ಕುಮಾರ್ ದತ್ತ

ಈ ಸುದ್ದಿಯನ್ನು ಶೇರ್ ಮಾಡಿ

Riioak Kumar Datta

ಬೆಂಗಳೂರು, ಜ.31- ಹಿರಿಯ ಐಪಿಎಸ್ ಅಧಿಕಾರಿ ರೂಪಕ್ ಕುಮಾರ್ ದತ್ತ ಅವರು ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಇಂದು ಅಧಿಕಾರ ವಹಿಸಿಕೊಂಡರು. ಮೂಲತಃ ಉತ್ತರ ಪ್ರದೇಶ(ಯುಪಿ)ದವರಾದ ದತ್ತ ಅವರು 1981ರಲ್ಲಿ ಐಪಿಎಸ್ ಪರೀಕ್ಷೆ ಪಾಸ್ ಮಾಡಿ ಕರ್ನಾಟಕ ಕೇಡರ್ ಪೊಲೀಸ್ ಅಧಿಕಾರಿಯಾಗಿ ಆಯ್ಕೆಯಾದರು. ಕರ್ನಾಟಕ ರಾಜ್ಯದಲ್ಲಿ ಪೊಲೀಸ್ ಸೇವೆ ಆರಂಭಿಸಿದ ಇವರು ಉತ್ತರ ಕನ್ನಡ, ದಾವಣಗೆರೆ ಜಿಲ್ಲೆಗಳಲ್ಲಿ ಎಸ್ಪಿಯಾಗಿ, ರಾಜ್ಯ ಗುಪ್ತದಳದ ಡಿಐಜಿಯಾಗಿ, ಉತ್ತರವಲಯ, ಈಶಾನ್ಯ ವಲಯದಲ್ಲಿ ಐಜಿಪಿಯಾಗಿ, ಕಾನೂನು ಮತ್ತು ಸುವ್ಯವಸ್ಥೆ ವಿಭಾಗ ಹಾಗೂ ಲೋಕಾಯುಕ್ತದಲ್ಲಿ ಎಡಿಜಿಪಿಯಾಗಿ, ಕರ್ನಾಟಕದ ಸಿಐಡಿ ವಿಭಾಗದಲ್ಲಿ ಸೇವೆ ಸಲ್ಲಿಸಿರುವ ಇವರು ಸಿಬಿಐನಲ್ಲಿ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದಾರೆ. ಇವರು ಈ ವರ್ಷದ ಅಕ್ಟೋಬರ್ ತಿಂಗಳಲ್ಲಿ ಪೊಲೀಸ್ ಸೇವೆಯಿಂದ ನಿವೃತ್ತಿಯಾಗಲಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin