ಆಸ್ಟ್ರೇಲಿಯಾದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಭಾರತದ ಮಹಿಳೆ ಸೇರಿ 6 ಜನ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Indian-Umen

ಮೆಲ್ಬೊರ್ನ್, ಫೆ.1-ಆಸ್ಟ್ರೇಲಿಯಾದಲ್ಲಿ ಸಂಭವಿಸಿದ ರಸ್ತೆ ಅಪಘಾತವೊಂದರಲ್ಲಿ ತೀವ್ರ ಗಾಯಗೊಂಡಿದ್ದ ಭಾರತೀಯ ಮೂಲಕ ಮಹಿಳೆಯೊಬ್ಬರು ಮೃತಪಟ್ಟಿದ್ದು, ಇದರೊಂದಿಗೆ ದುರಂತದಲ್ಲಿ ಸತ್ತವರ ಸಂಖ್ಯೆ 6ಕ್ಕೇರಿದೆ.  ಮೆಲ್ಬೊರ್ನ್‍ನ ಬೋರ್ಕ್ ಸ್ಟ್ರೀಟ್‍ನಲ್ಲಿ ಜ.20ರಂದು ವೇಗವಾಗಿ ನುಗ್ಗಿ ಬಂದ ಕಾರೊಂದು ಪಾದಚಾರಿಗಳಿಗೆ ಅಪ್ಪಳಿಸಿತ್ತು. ಈ ದುರ್ಘಟನೆಯಲ್ಲಿ ಐವರು ಸ್ಥಳದಲ್ಲೇ ಸಾವಿಗೀಡಾಗಿ, ಭಾವಿತಾ ಸೇರಿದಂತೆ ಕೆಲವರು ಗಾಯಗೊಂಡಿದ್ದರು. ಬ್ಲಾಕ್‍ಬರ್ನ್ ಸೌತ್ ಉಪನಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ನಿನ್ನೆ ಮೃತಪಟ್ಟಿದ್ದಾರೆ ಎಂಧು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಇವರ ಸಾವಿನೊಂದಿಗೆ ಮೃತರ ಸಂಖ್ಯೆ ಆರಕ್ಕೇರಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin