ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ : ಬಾಲಕಿ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Accident
ಹುಬ್ಬಳ್ಳಿ, ಫೆ.1- ದ್ವಿಚಕ್ರ ವಾಹನ ಹಾಗೂ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಮೃತಪಟ್ಟು, ಆತನ ತಂದೆ-ತಾಯಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಡರಾತ್ರಿ ನಡೆದಿದೆ. ನಗರದ ಈಜಿಡೇ ಬಳಿ ಈ ಘಟನೆ ನಡೆದಿದ್ದು, ಕೀರ್ತಿ (14) ಮೃತ ದುರ್ದೈವಿಯಾಗಿದ್ದಾರೆ.  ಸಂಬಂಧಿಕರ ಮನೆಗೆ ತೆರಳಿ ದ್ವಿಚಕ್ರ ವಾಹನದಲ್ಲಿ ಮನೆಗೆ ಬರುತ್ತಿದ್ದಾಗ ಇಂದಿನಿಂದ ಬರುತ್ತಿದ್ದಾಗ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ನಂತರ ಅವರ ಮೇಲೆ ಹರಿದು ಪರಾರಿಯಾಗಿದೆ.   ಯಾರು ಇಲ್ಲದ ಕಾರಣ ಸೂಕ್ತ ಚಿಕಿತ್ಸೆ ದೊರೆಯದೆ ಬಾಲಕಿ ಸ್ಥಳದಲ್ಲೇ ಮೃತಪಟ್ಟರೆ, ಹನುಮಂತೇಗೌಡ ಪಾಟೀಲ ಮತ್ತು ಅವರ ಪತ್ನಿ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ನೋಡಿ ಸ್ಥಳೀಯರೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.  ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಅಪಘಾತವೆಸಗಿದ ಲಾರಿ ಚಾಲಕ ವಾಹನ ನಿಲ್ಲಿಸದೆ ಪರಾರಿಯಾಗಿದ್ದು, ಆತನ ಪತ್ತೆಗೆ ಬಲೆ ಬೀಸಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin