ಮೋದಿ ತವರು ಗುಜರಾತ್ ಮತ್ತು ಜಾರ್ಖಂಡ್‍ಗೆ ಏಮ್ಸ್ ಘೋಷಣೆ

ಈ ಸುದ್ದಿಯನ್ನು ಶೇರ್ ಮಾಡಿ

AIIMS

ನವದೆಹಲಿ,ಫೆ.1-ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತಿಗೆ ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ ಅಖಿಲ ಭಾರತೀಯ ವೈದ್ಯಕೀಯ ಮಹಾವಿದ್ಯಾಲಯ(ಏಮ್ಸ್) ಘೋಷಣೆ ಮಾಡಲಾಗಿದೆ. ಗುಜರಾತ್ ಹಾಗೂ ಜಾರ್ಖಂಡ್‍ಗಳಿಗೆ ಮಾತ್ರ ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ ಎರಡು ಏಮ್ಸ್ ಸ್ಥಾಪನೆ ಮಾಡುವುದಾಗಿ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಘೋಷಿಸಿದ್ದಾರೆ. ಕೇಂದ್ರ ಬಜೆಟ್ – 2017 (Live Updates) ]

ಕಳೆದ ಸಾಲಿನ ಬಜೆಟ್‍ನಲ್ಲಿ ಒಟ್ಟು ಆರು ಏಮ್ಸ್ ಸ್ಥಾಪನೆಗೆ ಅನುಮೋದನೆ ನೀಡಲಾಗಿತ್ತು. ಈಗಾಗಲೇ ಇವುಗಳು ಕಾರ್ಯೋನ್ಮುಖವಾಗಿರುವುದರಿಂದ ಈ ಬಾರಿ ಎರಡು ಏಮ್ಸ್ ಸ್ಥಾಪನೆ ಮಾಡುವುದಾಗಿ ಅವರು ತಿಳಿಸಿದರು. ದೇಶಾದ್ಯಂತ 600 ಕೌಶಲ್ಯ ಅಭಿವೃದ್ದಿ ಕೇಂದ್ರಗಳನ್ನು ಸ್ಥಾಪನೆ ಮಾಡುವುದರ ಜೊತೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೂ ಅನುದಾನವನ್ನು ದುಪ್ಪಟ್ಟು ಮಾಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin