ರಾಷ್ಟ್ರಪತಿ ಭಾಷಣದ ಕುಸಿದು ಬಿದ್ದಿದ್ದ ಸಂಸದ ಅಹಮದ್ ಹೃದಯಾಘಾತದಿಂದ ನಿಧನ, ಗಣ್ಯರ ಸಂತಾಪ

ಈ ಸುದ್ದಿಯನ್ನು ಶೇರ್ ಮಾಡಿ

E-ahamad

ನವದೆಹಲಿ, ಫೆ.1– ನಿನ್ನೆ ರಾಷ್ಟ್ರಪತಿ ಭಾಷಣದ ವೇಳೆ ಸಂಸತ್ತಿನಲ್ಲೇ ಹೃದಯಸ್ತಂಭನಕ್ಕೆ ಒಳಗಾಗಿದ್ದ ಲೋಕಸಭಾ ಸದಸ್ಯ ಮತ್ತು ಕೇಂದ್ರದ ಮಾಜಿ ಸಚಿವ ಇ. ಅಹಮದ್ (78) ಇಂದು ಮುಂಜಾನೆ ನಿಧನರಾಗಿದ್ದಾರೆ. ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಭಾಷಣ ಮಾಡುತ್ತಿದ್ದಾಗ ಅಹಮದ್ ಉಸಿರಾಟದ ಸಮಸ್ಯೆಯಿಂದ ತೀವ್ರ ಅಸ್ವಸ್ಥರಾದರು. ಕೂಡಲೇ ಅವರನ್ನು ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ದಾಖಲಿಸಲಾಯಿತು.  ಆಸ್ಪತ್ರೆಗೆ ಕರೆತಂದಾಗ ಅವರ ಹೃದಯ ಬಡಿತ ನಿಂತು ಹೋಗಿತ್ತು. ವೈದ್ಯರ ತಂಡ ಹೃದಯ ಬಡಿತ ಆರಂಭವಾಗುವಂತೆ ಮಾಡುವಲ್ಲಿ ಯಶಸ್ವಿಯಾಯಿತು. ಆದರೆ ಅವರ ಸ್ಥಿತಿ ಬಿಗಡಾಯಿಸಿ ಕಾರಣ ಮಧ್ಯಾಹ್ನ 2.15ರ ವೇಳೆಗೆ ಅವರನ್ನು ತೀವ್ರ ನಿಗಾ ಘಟಕಕ್ಕೆ ವರ್ಗಾಯಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ 2.15ರಲ್ಲಿ ಅವರು ಕೊನೆಯುಸಿರೆಳೆದರು ಎಂದು ಆಸ್ಪತ್ರೆಯ ಹಿರಿಯ ವೈದ್ಯರು ತಿಳಿಸಿದ್ದಾರೆ.

ಕೇರಳದವರಾದ ಅಹಮದ್ ಭಾರತೀಯ ಮುಸ್ಲಿಂ ಲೀಗ್‍ನ ಅಧ್ಯಕ್ಷರಾಗಿದ್ದರು. ಮಣಪ್ಪುರಂ ಕ್ಷೇತ್ರದ ಸಂಸದರಾಗಿರುವ ಅವರು ಡಾ. ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ವಿದೇಶಾಂಗ ವ್ಯವಹಾರಗಳ ಖಾತೆ ರಾಜ್ಯ ಸಚಿವರಾಗಿದ್ದರು.

ಗಣ್ಯರ ಸಂತಾಪ :

ಅಹಮದ್ ನಿಧನಕ್ಕೆ ರಾಷ್ಟ್ರಪತಿ ಪ್ರಣವ್ ಮುಖರ್ಜಿ, ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಂಪುಟ ಸದಸ್ಯರು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್, ಐಎಂಎಲ್ ಮುಖಂಡರು ಸೇರಿದಂತೆ ವಿವಿಧ ಪಕ್ಷಗಳ ನಾಯಕರು ಮತ್ತು ಗಣ್ಯರು ಸಂತಾಪ ಸೂಚಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin