ವಿಜಯ್‍ಮಲ್ಯ – ಲಲಿತ್‍ಮೋದಿ ಆಸ್ತಿ ಮುಟ್ಟುಗೋಲು

ಈ ಸುದ್ದಿಯನ್ನು ಶೇರ್ ಮಾಡಿ

Vijaya-Malya

ನವದೆಹಲಿ,ಫೆ.1-ದೇಶದ ವಿವಿಧ ಬ್ಯಾಂಕ್‍ಗಳಲ್ಲಿ ಸಾಲ ಪಡೆದು ತಲೆಮರೆಸಿಕೊಂಡಿರುವ ವಂಚಕರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವುದಾಗಿ ಕೇಂದ್ರ ಸರ್ಕಾರ ಇಂದು ಎಚ್ಚರಿಸಿದೆ. ಹೆಂಡದ ದೊರೆ ವಿಜಯ್ ಮಲ್ಯ, ಐಪಿಎಲ್ ಹಗರಣದ ರೂವಾರಿ ಲಲಿತ್ ಮೋದಿ ಸೇರಿದಂತೆ ಯಾರೇ ಆಗಲಿ ದೇಶಕ್ಕೆ ವಂಚನೆ ಮಾಡಿರುವವರ ವಿರುದ್ದ ಕಾನೂನು ಪ್ರಕಾರವೇ ಕ್ರಮ ಕೈಗೊಳ್ಳುವುದಾಗಿ ಅರುಣ್ ಜೇಟ್ಲಿ ತಮ್ಮ ಬಜೆಟ್‍ನಲ್ಲಿ ಪ್ರಸ್ತಾಪಿಸಿದ್ದಾರೆ. ಕೇಂದ್ರ ಬಜೆಟ್ – 2017 (Live Updates) ]

ಬ್ಯಾಂಕ್‍ಗಳಿಂದ ಸಾಲ ಪಡೆದವರು ಎಲ್ಲೆ ಇರಲಿ ಅವರನ್ನು ಸ್ವದೇಶಕ್ಕೆ ಕರೆತರುವ ಪ್ರಕ್ರಿಯೆಗಳು ಆರಂಭವಾಗಿವೆ. ವಿಜಯ್ ಮಲ್ಯ, ಲಲಿತ್ ಮೋದಿಯೇ ಆಗಲಿ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ. ಸಾಲ ವಸೂಲಾತಿ ಮಾಡುವ ಕ್ರಮದಲ್ಲಿ ಈಗಾಗಲೇ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಪ್ರಕ್ರಿಯೆ ಆರಂಭವಾಗಿದೆ ಎಂದರು.   ಈಗಾಗಲೇ ಮಲ್ಯ ಮತ್ತು ಲಲಿತ್ ಮೋದಿಯನ್ನು ಸ್ವದೇಶಕ್ಕೆ ಕರೆತರಲು ಇಂಟರ್‍ಪೋಲ್ ಮೂಲಕ ಪ್ರಕ್ರಿಯೆಯನ್ನು ಆರಂಭಿಸಿದ್ದೇವೆ.

ಒಂಭತ್ತು ಸಾವಿರ ಕೋಟಿ ಸಾಲ ಪಡೆದಿರುವ ವಿಜಯ್ ಮಲ್ಯ ಆಸ್ತಿಯನ್ನು ಜಾರಿ ನಿರ್ದೇಶನಾಲಯ, ಐಟಿ ಅಧಿಕಾರಿಗಳು ತಮ್ಮ ಸುಪರ್ದಿಗೆ ತೆಗೆದುಕೊಂಡಿದ್ದಾರೆ. ದೇಶದಲ್ಲಿ ಹೊಂದಿರುವ ಚರ-ಸ್ಥಿರಾಸ್ತಿಗಳನ್ನು ಸರ್ಕಾರ ತನ್ನ ವಶಕ್ಕೆ ತೆಗೆದುಕೊಳ್ಳಲಿದೆ.  ದೇಶದ ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ಹೇಗೆ , ಯಾವ ರೀತಿಯಲ್ಲಿ ಸಾಲ ವಸೂಲಿ ಮಾಡಬೇಕೆಂಬುದು ನಮಗೂ ಗೊತ್ತಿದೆ. ಯಾರನ್ನು ರಕ್ಷಣೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin