ಕಾನ್ಪುರ್ : ಬಹುಮಹಡಿ ಕಟ್ಟಡ ಕುಸಿದು ಹಲವರ ಸಾವು, ನಾಲ್ಕು ಮೃತದೇಹ ಹೊರಕ್ಕೆ

ಈ ಸುದ್ದಿಯನ್ನು ಶೇರ್ ಮಾಡಿ

5-Dead ಕಾನ್ಪುರ್, ಫೆ. 2- ಇಲ್ಲಿನ ಜಜ್ಮೌ ಪ್ರದೇಶದಲ್ಲಿ ನಿರ್ಮಾಣ ಹಂತದ ಬಹುಮಹಡಿ ಕಟ್ಟಡವೊಂದು ಕುಸಿದು ಬಿದ್ದು ಹಲವರು ಅವಶೇಷಗಳಡಿ ಸಿಲುಕಿದ್ದಾರೆ.  7 ಜನ ಸಾವನ್ನಪ್ಪಿದ್ದು  ಇದುವರೆಗೆ ನಾಲ್ಕು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇನ್ನೂ ಅನೇಕರು ಕೆಳಗಡೆ ಸಿಲುಕಿದ್ದು, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆಗಳಿವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಸುಮಾರು 40 ಜನ ಅವಶೇಷಗಳಡಿ ಸಿಕ್ಕಿ ಹಾಕಿಕೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಸಮರೋಪಾದಿಯಲ್ಲಿ ಮುಂದುವರಿದಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳದ ಸಿಬ್ಬಂದಿ, ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಹಾಗೂ ಸಾರ್ವಜನಿಕರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ ಎಂದು ಕಾನ್ಪುರ್ ಜಿಲ್ಲಾ ದಂಡಾಧಿಕಾರಿಕೌಶಲ್ ರಾಜ್ ತಿಳಿಸಿದ್ದಾರೆ.

Kanpur-01

ಸಮಾಜವಾದಿ ಪಕ್ಷದ ನಾಯಕ ಮೆಹ್ತಾಬ್ ಅಲಂ ಎಂಬುವವರಿಗೆ ಸೇರಿದ ಈ ಕಟ್ಟಡದ ಆರನೆ ಮಹಡಿಯಲ್ಲಿ 50ಕ್ಕೂ ಹೆಚ್ಚು ಜನ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಆಗ ಇದ್ದಕ್ಕಿದ್ದಂತೆ ಕಟ್ಟಡ ಕುಸಿದು ಬಿತ್ತು. 12 ಜನರನ್ನು ರಕ್ಷಿಸಲಾಗಿದೆ. ಅವರನ್ನೆಲ್ಲಾ ಆಸ್ಪತ್ರೆಗೆ ದಾಖಲಿಸಿದ್ದು ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅವರು ಹೇಳಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin