ಅರ್ಕಾವತಿ ಸೇತುವೆ ಬಳಿ ಉರುಳಿ ಬಿದ್ದ ಬಿಎಂಟಿಸಿ ಬಸ್, ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಈ ಸುದ್ದಿಯನ್ನು ಶೇರ್ ಮಾಡಿ

Bus-Accidet---01

ನೆಲಮಂಗಲ, ಫೆ.3-ಕೆಂಗೇರಿಯಿಂದ ನೆಲಮಂಗಲಕ್ಕೆ ತೆರಳುತ್ತಿದ್ದ ಬಿಎಂಟಿಸಿ ಬಸ್ ನಿಯಂತ್ರಣ ತಪ್ಪಿ ಉರುಳಿಬಿದ್ದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇಂದು ಬೆಳಗ್ಗೆ 9.30ರಲ್ಲಿ ಕೆಂಗೇರಿಯಿಂದ ನೆಲಮಂಗಲಕ್ಕೆ ಬರುತ್ತಿದ್ದ ಬಿಎಂಟಿಸಿ ಬಸ್ ನೆಲಮಂಗಲ-ತಾವರೆಕೆರೆಯ ಮಧ್ಯೆ ವರ್ತೂರಿನ ಅರ್ಕಾವತಿ ಸೇತುವೆ ಬಳಿಯ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಉರುಳಿಬಿದ್ದಿದೆ. ಪರಿಣಾಮವಾಗಿ ಚಾಲಕನಿಗೆ ಗಂಭೀರ ಗಾಯವಾಗಿದ್ದು, 15 ಮಂದಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

Bus-Accidet---02

ನಾಲ್ವರು ಗಾಯಾಳುಗಳನ್ನು ನೆಲಮಂಗಲ ಖಾಸಗಿ ಆಸ್ಪತ್ರೆಗೆ, ಉಳಿದವರು ಮಾಗಡಿ ರಸ್ತೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಸುದ್ದಿ ತಿಳಿದ ಪಿಎಸ್‍ಐ ರವಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ತಾವರೆಕೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin