ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

Anganawadi-Protest

ಬೆಂಗಳೂರು,ಫೆ.3-ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ನಗರದ ರೈಲ್ವೆ ನಿಲ್ದಾಣದಿಂದ ಫ್ರೀಡಂಪಾರ್ಕ್‍ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದರಿಂದ ಟ್ರಾಫಿಕ್‍ಜಾಮ್ ಉಂಟಾಗಿ ವಾಹನ ಸವಾರರು, ಸಾರ್ವಜನಿಕರು ಪರದಾಡಬೇಕಾಯಿತು.  ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಸರ್ಕಾರದ ವಿರುದ್ದ ಘೋಷಣೆ ಕೂಗುತ್ತಾ ರೈಲು ನಿಲ್ದಾಣದಿಂದ ಫ್ರೀಡಂಪಾರ್ಕ್‍ವರೆಗೆ ಮೆರವಣಿಗೆ ನಡೆಸಿದರು. ಈ ವೇಳೆ ಬಹಳಷ್ಟು ವಾಹನಗಳು ಸಾಲು ನಿಂತು ಸಾರ್ವಜನಿಕರು ತೊಂದರೆ ಅನುಭವಿಸಿದರು.

ಕಾರ್ಮಿಕ ಕಾಯ್ದೆಯನ್ನು ಜಾರಿಗೊಳಿಸಿ ಸಮಾನ ಕೆಲಸಕ್ಕೆ ಸಮಾನವೇತನ ನೀಡಬೇಕು, ಕೆಲಸ ಖಾಯಂಗೊಳಿಸದಿದ್ದಲ್ಲಿ ಅಂಗನವಾಡಿ ಸಮಯ ವಿಸ್ತರಣೆಯನ್ನು ಹಿಂತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.   ಆರೋಗ್ಯ ವಿಮೆ ಜಾರಿಗೊಳಿಸಿ ತೀವ್ರ ಸ್ವರೂಪದ ಕಾಯಿಲೆಗೆ ನೀಡುವ ಪರಿಹಾರ ಧನ ಹೆಚ್ಚಿಸುವುದರ ಜೊತೆಗೆ ಚಿಕಿತ್ಸೆಗೊಳಗಾದ ಸಂದರ್ಭದಲ್ಲಿ ಗೌರವ ಧನ ಸಹಿತ ರಜೆ ನೀಡಬೇಕು. ಮಿನಿ ಅಂಗನವಾಡಿಗಳನ್ನು ಮೇಲ್ದರ್ಜೆಗೇರಿಸಬೇಕು, ನಗರ ಪ್ರದೇಶದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ತುಟಿ ಭತ್ಯೆ ನೀಡಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಪದೇ ಪದೇ ಸರ್ಕಾರಗಳಿಗೆ ಒತ್ತಾಯಿಸುತ್ತಿದ್ದರೂ ಇದುವರೆಗೂ ಬೇಡಿಕೆಗಳು ಈಡೇರಿಲ್ಲ ಎಂದು ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ರಾಜ್ಯ ಕಾರ್ಯದರ್ಶಿ ವಿಜಯಲಕ್ಷ್ಮಿ , ಖಜಾಂಚಿ ಎಂ.ಪಿ.ಭಾರತಿ, ಬಿ.ಆರ್.ಜಯಲಕ್ಷ್ಮಿ , ಬಿ.ಎಸ್.ನಿರ್ಮಲ, ಎಚ್.ಕೆ.ಶಾಂತಿ ಮತ್ತಿತರರು ಆಗ್ರಹಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin