ವಿವಿಧ ರಾಜ್ಯಗಳ ವಿವಿ ಮತ್ತು ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ : ಕೇಂದ್ರ ಭರವಸೆ

ಈ ಸುದ್ದಿಯನ್ನು ಶೇರ್ ಮಾಡಿ

Praksah-Javdekar

ನವದೆಹಲಿ, ಫೆ.3- ದೇಶದ ವಿವಿಧ ರಾಜ್ಯಗಳ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಖಾಲಿ ಇರುವ ಬಹುತೇಕ ಉಪನ್ಯಾಸಕರ ಹುದ್ದೆಗಳಿಗೆ ಈ ವರ್ಷ ನೇಮಕಾತಿ ನಡೆಯಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.   ರಾಜ್ಯಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಕರಣ್ ಸಿಂಗ್ ಪ್ರಶ್ನೆಗೆ ಉತ್ತರವಾಗಿ ಈ ವಿಷಯ ತಿಳಿಸಿದ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವೇಡ್ಕರ್, 2016ರ ಅ.1ರವರೆಗೆ ಯುಜಿಸಿ ಅನುದಾನಿತ ವಿಶ್ವವಿದ್ಯಾಲಯಗಳಲ್ಲಿ 6,080 ಹಾಗೂ ಅನುದಾನಿತ ಕಾಲೇಜುಗಳಲ್ಲಿ 3,315 ಉಪನ್ಯಾಸಕರ ಹುದ್ದೆಗಳು ಖಾಲಿ ಇವೆ. ಇವುಗಳಲ್ಲಿ ಬಹುತೇಕ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.

ಖಾಲಿ ಇರುವ ಹುದ್ದೆಗಳನ್ನು ನಿಯಮಿತವಾಗಿ ಭರ್ತಿ ಮಾಡಿಕೊಳ್ಳಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಯುಜಿಸಿ ಮಾರ್ಗಸೂಚಿಗಳನ್ನು ಪಾಲಿಸಲಾಗುವುದು. ವಿದೇಶಗಳಲ್ಲಿ ಸಂದರ್ಶನ ನಡೆಸುವ ಮೂಲಕ ದೇಶದ ಪ್ರತಿಭೈಗಳನ್ನು ಮರಳಿ ಕರೆಸಿಕೊಳ್ಳುವ ಬಗ್ಗೆ ಚಿಂತನೆ ನಡೆದಿದೆ ಎಂದು ಸಚಿವರು ಹೇಳಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin