ಗೋವಾ, ಪಂಜಾಬ್ ನಲ್ಲಿ ಮತದಾನ ಆರಂಭ

ಈ ಸುದ್ದಿಯನ್ನು ಶೇರ್ ಮಾಡಿ

Voting-01

ನವದೆಹಲಿ.ಫೆ.04 : ಪಂಜಾಬ್ ಮತ್ತು ಗೋವಾದ ವಿಧಾನಸಭಾ ಚನಾವಣೆಗೆ ಇಂದು ಬೆಳಿಗ್ಗೆಯಿಂದ ಮತದಾನ ಆರಂಭವಾಗಿದೆ. ಪಂಜಾಬ್’ನ 117 ಕ್ಷೇತ್ರಗಳಲ್ಲಿ ಸ್ಪರ್ಧೆ ನಡೆಯುತ್ತಿದ್ದು, ಒಟ್ಟು 1,145 ಅಭ್ಯರ್ಥಿಗಳು ಕಣದಲ್ಲಿದ್ದು, ಅವರಲ್ಲಿ 81 ಮಹಿಳೆಯರು. ಒಟ್ಟು 22,616 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದ್ದು, ಅವುಗಳಲ್ಲಿ 5,500 ಸೂಕ್ಷ್ಮ ಮತ್ತು 800 ಅತಿಸೂಕ್ಷ್ಮ ಮತಗಟ್ಟೆಗಳಿವೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಗೋವಾ 40 ವಿಧಾನಸಭಾ ಕ್ಷೇತ್ರಗಳಿಗೂ ಇಂದು ಮತದಾನ ನಡೆಯುತ್ತಿದೆ. ಒಟ್ಟು 250 ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ. 11 ಲಕ್ಷ ಜನರು ಮತ ಚಲಾಯಿಸಲಿದ್ದಾರೆ. ಬಿಜೆಪಿ 37, ಕಾಂಗ್ರೆಸ್ 38 ಮತ್ತು ಎಎಪಿ 39 ಅಭ್ಯರ್ಥಿಗಳನ್ನು ಕ್ಕಿಳಿಸಿವೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ. ಕೇಂದ್ರೀಯ ಮೀಸಲು ಪೊಲೀಸ್ ಪಡೆ ಸೇರಿದಂತೆ ವಿವಿಧ ಭದ್ರತಾ ಪಡೆಗಳ ಸುಮಾರು ಒಂದು ಲಕ್ಷ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ’ ಎಂದು ಪಂಜಾಬ್ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ವಿ.ಕೆ.ಭಾವ್ರಾ ಹೇಳಿದ್ದಾರೆ. ಗೋವಾದಲ್ಲಿ. ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin