ಪ್ರಾಧಿಕಾರದ ಬಡಾವಣೆ ಸಮಸ್ಯೆಗಳನ್ನು ಆಲಿಸಿದ ಸಚಿವ ಕೃಷ್ಣಪ್ಪ

ಈ ಸುದ್ದಿಯನ್ನು ಶೇರ್ ಮಾಡಿ

krishna

ಮಂಡ್ಯ,ಫೆ.3-ನಗರದ ಅಭಿವೃದ್ದಿ ಪ್ರಾಧಿಕಾರ ಬಡಾವಣೆಗಳಿಗೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಕೃಷ್ಣಪ್ಪ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳ ಬಗ್ಗೆ ಪರಿಶೀಲನೆ ನಡೆಸಿದರು. ವಿವೇಕಾನಗರ ನಿವಾಸಿಗಳ ಸಂಘದ ಅಧ್ಯಕ್ಷ ಕಿಲಾರಿ ಕೃಷ್ಣ ಬಡಾವಣೆಯಲ್ಲಿರುವ ಸಮಸ್ಯೆಗಳ ಬಗ್ಗೆ ಸಚಿವರಿಗೆ ಮಾಹಿತಿ ನೀಡಿದರು.ಈ ವೇಳೆ ಮಾತನಾಡಿದ ಸಚಿವರು, ಕುಡಿಯುವ ನೀರು, ಒಳಚರಂಡಿ ವ್ಯವಸ್ಥೆ, ರಸ್ತೆ ಸೇರಿದಂತೆ ಮತ್ತಿತರ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವುದಾಗಿ ಭರವಸೆ ನೀಡಿದರು. ಬಡಾವಣೆ ನಿವಾಸಿಗಳೂ ಕೂಡ ಸಚಿವರೊಂದಿಗೆ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡು, ಶೀಘ್ರ ಬಡಾವಣೆಯಲ್ಲಿರುವ ಸಮಸ್ಯೆಗಳಿಗೆ ಪರಿಹಾರ ನೀಡುವಂತೆ ಮನವಿ ಮಾಡಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin