ಮರಳು ದಿಬ್ಬ ಕುಸಿದು ವ್ಯಕ್ತಿ ಸಾವು
ಗೌರಿಬಿದನೂರು, ಫೆ.4-ತಾಲೂಕಿನ ಉದೂತಿ ಗ್ರಾಮದ ಹೊರವಲಯದಲ್ಲಿನ ಉತ್ತರ ಪಿನಾಕಿನಿ ನದಿಯಲ್ಲಿ ಮರಳು ತುಂಬುತ್ತಿದ್ದ ಸಂದರ್ಭದಲ್ಲಿ ಮರಳು ದಿಬ್ಬ ಕುಸಿದು ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಜರುಗಿದೆ.ಉದೂತಿ ಗ್ರಾಮದ ವಾಸಿ ನಾರಾಯಣಪ್ಪ (50) ಮೃತ ಪಟ್ಟ ವ್ಯಕ್ತಿ. ಈ ಸಂಬಂಧ ಗ್ರಾಮಾಂತರ ಠಾಣೆಯ ಎಸ್ಐ ಅವಿನಾಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
< Eesanje News 24/7 ನ್ಯೂಸ್ ಆ್ಯಪ್ >
Click Here to Download : Android / iOS
Facebook Comments