ಸಾಲಬಾಧೆ : ಮರಕ್ಕೆ ನೇಣು ಹಾಕಿಕೊಂಡು ಅಡುಗೆ ಭಟ್ಟ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

FARMERS--SUICIDE
ನಂಜನಗೂಡು, ಫೆ.3- ಸಾಲಬಾಧೆ ತಾಳಲಾರದೆ ನಗರದ ಶ್ರೀಕಂಠಶ್ವರ ಹೋಟೆಲ್‍ನಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದ ಕಣೇನೂರು ಗ್ರಾಮದ ಶಿವಮೂರ್ತಿ (35) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಕಳೆದ ಮೂರು ವರ್ಷದಿಂದ ಶ್ರೀಕಂಠೇಶ್ವರಹೋಟೆಲ್‍ನಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದು, ಸುಮಾರು 3ಲಕ್ಷಕ್ಕೂ ಹೆಚ್ಚು ಹಣ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಸಾಲ ತೀರಿಸಲಾಗದೆ ಕೈಗಾರಿಕಾ ಪ್ರದೇಶದಲ್ಲಿರುವ ಒಂದು ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಸುದ್ದಿ ತಿಳಿದ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‍ಐ ಪುನೀತ್, ಎಎಸ್‍ಐ ರಾಮ್‍ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin