ಅರಮನೆ ಮುಂಭಾಗದಲ್ಲಿ ಧ್ವನಿ -ಬೆಳಕು ಕಾರ್ಯಕ್ರಮ ಸ್ಥಗಿತ

ಈ ಸುದ್ದಿಯನ್ನು ಶೇರ್ ಮಾಡಿ

mysore

ಮೈಸೂರು, ಫೆ.5-ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭಗೊಂಡಿರುವ ಹಿನ್ನೆಲೆಯಲ್ಲಿ ಅರಮನೆ ಮುಂಭಾಗದಲ್ಲಿ ನಾಳೆಯಿಂದ ಫೆ.10ರವರೆಗೆ ಧ್ವನಿ ಮತ್ತು ಬೆಳಕು ಕಾರ್ಯಕ್ರಮ ಸ್ಥಗಿತಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ರಂದೀಪ್ ತಿಳಿಸಿದ್ದಾರೆ.ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಕಾರ್ಯಕ್ರಮದ ನಿಮಿತ್ತ ನಾಳೆಯಿಂದ ಅರಮನೆ ಮುಂಭಾಗದಲ್ಲಿ ಸಂಜೆ 6 ಗಂಟೆಯಿಂದ ವಿವಿಧ ಸಾಂಸ್ಕೃತಿಕ  ಕಾರ್ಯಕ್ರಮಗಳು ನಡೆಯಲಿರುವ ಹಿನ್ನೆಲೆಯಲ್ಲಿ ಧ್ವನಿ ಮತ್ತು ಬೆಳಕು ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಅರಮನೆ ಮುಂಭಾಗದಲ್ಲಿ ಫೆ.9ರಂದು 9ನೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಮಾರೋಪ ಸಮಾರಂಭ ನಡೆಯಲಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

 

Facebook Comments

Sri Raghav

Admin