ಹಂಪಿಯಲ್ಲಿ ಚಿರತೆ ಪ್ರತ್ಯಕ್ಷ, ಪ್ರವಾಸಿಗರಲ್ಲಿ ಆತಂಕ

ಈ ಸುದ್ದಿಯನ್ನು ಶೇರ್ ಮಾಡಿ

Humpi

ಬಳ್ಳಾರಿ,ಫೆ.5-ವಿಶ್ವವಿಖ್ಯಾತ ಹಂಪಿಯಲ್ಲಿ ಚಿರತೆ ಕಾಣಿಸಿಕೊಂಡು ಹಂಪಿಯ ಜನ ಸೇರಿದಂತೆ ಪ್ರವಾಸಿಗರು, ವಿದೇಶಿ ಪ್ರವಾಸಿಗರಲ್ಲಿ ಆತಂಕ ಸೃಷ್ಟಿಸಿದೆ. ಹಂಪಿ ಪ್ರದೇಶದಲ್ಲಿ ಒಬ್ಬಂಟಿಯಾಗಿ ಓಡಾಡುವ ವಿದೇಶಿಗರಿಗೆ ಚಿರತೆ ಪ್ರತ್ಯಕ್ಷವಾಗಿರುವುದರಿಂದ ಪ್ರಾಣಭೀತಿ ಎದುರಾಗಿದೆ. ವಿರೂಪಾಕ್ಷ ದೇವಸ್ಥಾನ ಹಿಂಭಾಗ ಮಾತಂಗ ಪರ್ವತ, ತುಂಗಭದ್ರ ನದಿ ದಂಡೆಯ ವಿವಿಧ ಕಡೆಗಳಲ್ಲಿ ಕಳೆದ ಕೆಲವು ದಿನಗಳಿಂದ ಚಿರತೆ ಕಾಣಿಸಿಕೊಂಡಿದ್ದು, ದೂರು ನೀಡಿದ್ದರೂ ಅರಣ್ಯ ಸಿಬ್ಬಂದಿ ಚಿರತೆ ಹಿಡಿಯಲು ಯಾವುದೇ ಕ್ರಮ ಕೈಗೊಂಡಿಲ್ಲ.   ಸ್ಥಳೀಯರು ಅರಣ್ಯ ಇಲಾಖೆ ಮತ್ತು ಪೊಲೀಸ್ ಸಿಬ್ಬಂದಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin